Connect with us

Dvgsuddi Kannada | online news portal | Kannada news online

ಚನ್ನಗಿರಿ: ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ

ಚನ್ನಗಿರಿ

ಚನ್ನಗಿರಿ: ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ

ಚನ್ನಗಿರಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಸವಿನೆನಪಿಗೋಸ್ಕರ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಗಳು ದೇಶಾದ್ಯಂತ ನಡೆಯಲಿದ್ದು,ಕರ್ನಾಟಕದಲ್ಲಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಾಡಿನ ಸಾಂಸ್ಕೃತಿಕ ಇತಿಹಾಸದಲ್ಲೇ ವಿನೂತನವಾದ ‘ಅಮೃತ ಭಾರತಿಗೆ ಕನ್ನಡದಾರತಿ ‘ ಎಂಬ ಶೀರ್ಷಿಕೆಯಲ್ಲಿ ರಾಜ್ಯದ ಆಯ್ದ 75 ಕಡೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಚನ್ನಗಿರಿ ಪಟ್ಟಣದಲ್ಲಿಯೂ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಮೇ 28 ರ ಶನಿವಾರ ಬೆಳಗ್ಗೆ 9 ಗಂಟೆಗೆ ಪಟ್ಟಣದ ಪ್ರವಾಸಿ ಮಂದಿರದ ಆವರಣದಿಂದ ವಿವಿಧ ಕಲಾ ತಂಡಗಳೊಂದಿಗೆ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆ ಮತ್ತು ಬೆಳಗ್ಗೆ 11 ಗಂಟೆಗೆ ಶ್ರೀ ಮೌದ್ಗಲ್ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಕಸಾಪ ಅಧ್ಯಕ್ಷ ಎಲ್.ಜಿ.ಮಧುಕುಮಾರ್ ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು, ಕನ್ನಡಪರ ಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನುಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top