ದಾವಣಗೆರೆ: 2022-23 ನೇ ಸಾಲಿನಲ್ಲಿ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸೇರ್ಪಡೆ ಯೋಜನೆಯಡಿ ಹೊಸದಾಗಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳ ಪಟ್ಟಿಯನ್ನು ಸಲ್ಲಿಸುವಂತೆ ತಿಳಿಸಿರುತ್ತಾರೆ.
ದಾವಣಗೆರೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಟಿತ ಶಾಲೆಗಳಿಗೆ ಪ್ರವೇಶ ನೀಡಲು ಅರ್ಜಿಯನ್ನು ಆಹ್ವಾನಿಸಿದ್ದು, ವಿದ್ಯಾರ್ಥಿಯು 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತಿರ್ಣರಾಗಿರಬೇಕು. ಪೋಷಕರ ವಾರ್ಷಿಕ ವರಮಾನ ರೂ.2,00,000/- (ರೂ.ಎರಡು ಲಕ್ಷಗಳು ಮಾತ್ರ) ಮೀರಿರಬಾರದು, ಸಂಬಂಧಿಸಿದ ಅರ್ಜಿಯೊಂದಿಗೆ ದೃಢೀಕರಿಸಿದ ಆದಾಯ ಪ್ರಮಾಣ ಪತ್ರ/ ಜಾತಿ ಪ್ರಮಾಣ ಪತ್ರ / ಗ್ರಾಮೀಣ ಅಭ್ಯರ್ಥಿಯಾದಲ್ಲಿ ಗ್ರಾಮೀಣ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಯನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು.
ಅರ್ಹ ಪರಿಶಿಷ್ಟ ವರ್ಗದ ಅಭ್ಯರ್ಥಿಗಳು ಅರ್ಜಿಯನ್ನು ಆಯಾ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ /ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದು ಅರ್ಜಿಗಳನ್ನು ಭರ್ತಿ ಮಾಡಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ:45, ಜಿಲ್ಲಾಢಳಿತ ಭವನ, ದಾವಣಗೆರೆ. ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಲು ಜೂ.07 ಕೊನೆಯ ದಿನವಾಗಿರುತ್ತದೆ. ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಧಿಕಾರಿ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



