Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಶ್ವ ತಂಬಾಕು ರಹಿತ ದಿನಾಚರಣೆಯ ಪ್ರಯುಕ್ತ ಜಾಗೃತಿ ಜಾಥಾ

ದಾವಣಗೆರೆ

ದಾವಣಗೆರೆ: ವಿಶ್ವ ತಂಬಾಕು ರಹಿತ ದಿನಾಚರಣೆಯ ಪ್ರಯುಕ್ತ ಜಾಗೃತಿ ಜಾಥಾ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿಇಂದು  ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ “ವಿಶ್ವ ತಂಬಾಕು ರಹಿತ ದಿನ” 2022 ರ ಅಂಗವಾಗಿ ಜಾಗೃತಿ ಜಾಥಾಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ನಾಯಕ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

“ತಂಬಾಕು ಪರಿಸರಕ್ಕೆ ಮಾರಕ” ಎಂಬ ಪ್ರಸಕ್ತ ವರ್ಷದ ಘೋಷಣೆ ಹಾಗೂ “ಗಿಡ ನೆಡಿ ತಂಬಾಕು ಬಿಡಿ” ಎಂಬ ಬಿತ್ತಿ ಪತ್ರಗಳನ್ನು ಒಳಗೊಂಡ ಕಾಲ್ನಡಿಗೆ ಜಾಥವು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ಘೋಷಣೆಗಳನ್ನು ಕೂಗುತ್ತಾ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಿಂದ ಹೊರಟು ಬಾಪೂಜಿ ಆಸ್ಪತ್ರೆಯ ಮಾರ್ಗವಾಗಿ ಪುನಃ ಜಿಲ್ಲಾಸ್ಪತ್ರೆಗೆ ಬಂದು ತಲುಪಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ್, ಜಿಲ್ಲಾ ಮಲೇರಿಯಾಧಿಕಾರಿ ಡಾ.ಕೆ.ನಟರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ರಾಘವನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಎನ್.ಸಿ.ಸಿ ವಿದ್ಯಾರ್ಥಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top