ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿಗೆ ಪ್ರತಿಭಾನ್ವಿತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 5ನೇ ತರಗತಿಯಲ್ಲಿ ಶೆ.60ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ ರೂ.2 ಲಕ್ಷದೊಳಗಿರಬೇಕು. ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ ಹಾಗೂ ಆದಾಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಆಯಾ ತಾಲ್ಲೂಕಿನಲ್ಲಿಯೇ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ ಹಾಗೂ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



