ದಾವಣಗೆರೆ:ಜಿಲ್ಲೆಯ ಪ್ರತಿ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕ, ಶಿಕ್ಷಕಿಗೆ ವೈಯಕ್ತಿಕವಾಗಿ ತಲಾ 10 ಸಾವಿರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಘೋಷಿಸಿದರು.
ಶಿಕ್ಷಕರ ದಿನಾಚರಣೆ ಅಂಗವಾಗಿ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಅತ್ತುತ್ತಮ 21 ಶಿಕ್ಷಕರಿಗೆ ಸನ್ಮಾನ ಮಾಡಿ ಮಾತನಾಡಿದರು.
ವೈಯಕ್ತಿಕವಾಗಿ ಜಿಲ್ಲೆಯ ಪ್ರತಿ ತಾಲೂಕಿನ ಓರ್ವ ಶಿಕ್ಷಕ, ಶಿಕ್ಷಕಿಗೆ ತಲಾ ಹತ್ತು ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. ನವೆಂಬರ್ 1ರಂದು ಅತ್ಯುತ್ತಮ ಶಿಕ್ಷಕರನ್ನು ಗುರುತಿಸಲು ಜಿಲ್ಲಾಡಳಿತ ಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಮುಂಬರುವ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಅಮಿತ್ ಶಾ ಅವರು ತಿಳಿಸಿದ್ದಾರೆ. ಇದಕ್ಕೆ ನಾವು ಬದ್ಧವಾಗಿದ್ದೇವೆ. ನಮ್ಮಲ್ಲಿ ನಾಯಕತ್ವದ ವಿಚಾರದ ಬಗ್ಗೆ ಗೊಂದಲ ಇಲ್ಲ. ಮಾಜಿ ಸಿಎಂ ಯಡಿಯೂರಪ್ಪ ಅವರ ಪ್ರವಾಸದ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವುದರಲ್ಲಿ ತಪ್ಪಿಲ್ಲ.ಯಡಿಯೂರಪ್ಪ ಅಥವಾ ಜಗದೀಶ ಶೆಟ್ಟರ್ ಗೆ ಮಾತುಕತೆ ಬಗ್ಗೆ ನನಗೆ ಗೊತ್ತಿಲ್ಲ ಎಂದರು.



