ದಾವಣಗೆರೆ: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಕುಸ್ತಿ ವಿಭಾಗದಲ್ಲಿ ದಾವಣಗೆರೆಯ 5 ನೌಕರರು ಚಿನ್ನ ಹಾಗೂ ಒಬ್ಬರು ಕಂಚಿನ ಪದಕ ಪಡೆದುಕೊಂಡಿದ್ದಾರೆ. ಇದರೊಂದಿಗೆ ರಾಷ್ಟ್ರಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ. ನವೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಮೇ 30ರಿಂದ ಜೂನ್ 1ವರೆಗೆ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು.ಈ ಸ್ಫರ್ಧೆಯಲ್ಲಿ ಕುಸ್ತಿಯಲ್ಲಿ 6 ನೌಕರರು ಬಹುಮಾನಗಳನ್ನು ಜಯಿಸುವ ಮೂಲಕ ಸಾಧನೆ ಮಾಡಿದ್ದಾರೆ. 68 ಕೆ.ಜಿ.ವಿಭಾಗದಲ್ಲಿ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ಮಂಜಮ್ಮ, 57 ಕೆ.ಜಿ.ವಿಭಾಗದಲ್ಲಿ ಇಎಸ್‌ಐ ಆಸ್ಪತ್ರೆಯ ಕವಿತಾ ಪಿ.ಎಂ., 65 ಕೆ.ಜಿ.ವಿಭಾಗದಲ್ಲಿ ಆರೋಗ್ಯ ಇಲಾಖೆಯ ಸುಧಾ, 55 ಕೆ.ಜಿ.ವಿಭಾಗದಲ್ಲಿ ನ್ಯಾಯಾಂಗ ಇಲಾಖೆಯ ಭುವನಲಕ್ಷ್ಮಿ, 59 ಕೆ.ಜಿ.ವಿಭಾಗದಲ್ಲಿ ಪದವಿಪೂರ್ವ ಇಲಾಖೆ ಓಂಕಾರಮ್ಮ ಪ್ರಥಮ ಸ್ಥಾನ ಪಡೆದಿದ್ದಾರೆ. ಇಎಸ್‌ಐ ಆಸ್ಪತ್ರೆಯ ಪವಿತ್ರಾ ಅವರು ತೃತೀಯ ಸ್ಥಾನ ಪಡೆದಿದ್ದಾರೆ.ದಾವಣಗೆರೆಯ ಕುಸ್ತಿ ತರಬೇತುದಾರ ಶಿವಾನಂದ್ ಅವರಿಂದ ನೌಕರರು ತರಬೇತಿ ಪಡೆದಿದ್ದರು.



