ದಾವಣಗೆರೆ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕರ್ನಾಟಕ ಲೋಕಾಯುಕ್ತ ದಾವಣಗೆರೆ ಘಟಕದ ಸಂಯುಕ್ತಾಶ್ರಯದಲ್ಲಿ ಚನ್ನಗಿರಿ ತಾಲ್ಲೂಕಿನ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಚನ್ನಗಿರಿಯ ಪ್ರವಾಸಿ ಮಂದಿರದಲ್ಲಿ ಜೂ.09 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆ ಬಗ್ಗೆ ಸೂಕ್ತ ಅರಿವು ನೀಡಲಾಗುವುದು, ತಾಲ್ಲೂಕು ಮತ್ತು ಜಿಲ್ಲೆಯ ಸರ್ಕಾರಿ ಕಾರ್ಯಾಲಯಗಳಲ್ಲಿ ನಡೆಯುತ್ತಿರುವ ದುರಾಡಳಿತ, ವಿಳಂಬ ನೀತಿ, ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾರತಮ್ಯ ನೀತಿ ಅನುಸರಿಸುವುದು, ಕಳಪೆ ಕಾಮಗಾರಿ, ಹಣ ದುರುಪಯೋಗ ಕುರಿತ ದೂರುಗಳನ್ನು ಪ್ರಪತ್ರ-1 ಮತ್ತು 2 ರಲ್ಲಿ ಅಫಿಡವಿಟ್‍ನೊಂದಿಗೆ ಸಲ್ಲಿಸಬಹುದು. ದೂರುಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ ಅಂತಹ ದೂರಗಳನ್ನು ಸ್ವೀಕರಿಸುವುದಿಲ್ಲವೆಂದು ಲೋಕಾಯುಕ್ತಾ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೊರೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



