ದಾವಣಗೆರೆ: ದೇಶದಾದ್ಯಂತ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ಕರೆ ಹಿನ್ನಲೆ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜೂ,11 ರ ಸಂಜೆ 6 ಗಂಟೆಯಿಂದ ಜೂನ್ 12 ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ಎಸ್.ಡಿ.ಪಿ.ಐ.ಕರ್ನಾಟಕ ವತಿಯಿಂದ ಆಯೋಜಿಸಲಾಗಿದ್ದ ಜನಾಧಿಕಾರ ಸಮಾವೇಶವನ್ನು ರದ್ದುಗೊಳಿಸಲು ಅಯೋಜಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.ಪ್ರವಾದಿ ಮಹಮದ್ ಪೈಗಂಬರರ ಬಗೆಗೆ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೇಶದಾದ್ಯಂತ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸುತಿದ್ದು,ಎಸ್.ಡಿ.ಪಿ.ಐ.ಜನಾಧಿಕಾರ ಸಮಾವೇಶದ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಮತೀಯ ಭಾವನೆಗಳಿಗೆ ಧಕ್ಕೆಯುಂಟುಮಾಡಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆಗಳಿರುವುದರಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ರ್ಯಾಲಿ, ಪ್ರತಿಭಟನೆ,ಮೆರವಣಿಗೆ,ಸಮಾವೇಶ ನಡೆಯದಂತೆ ಮತ್ತು ಗುಂಪು ಸೇರದಂತೆ ಕಲಂ 144 ಸಿ.ಆರ್.ಪಿ.ಸಿ. ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.



