ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಾಮಾನ್ಯ ಪ್ರವೇಶ ಪರೀಕ್ಷೆಗಳು ದಾವಣಗೆರೆ ನಗರದ ಒಟ್ಟು 19 ಪರೀಕ್ಷಾ ಕೇಂದ್ರಗಳಲ್ಲಿ ಜೂ.16 ಮತ್ತು 17 ರಂದು ನಡೆಯುವ ಹಿನ್ನಲೆಯಲ್ಲಿ ಪರೀಕ್ಷೆಗಳಲ್ಲಿ ಅವ್ಯವಹಾರ ತಡೆಗಟ್ಟಲು ಮತ್ತು ಸುಗಮ ರೀತಿಯಲ್ಲಿ ಪರೀಕ್ಷೆಗಳು ನಡೆಯುವಂತೆ ಕ್ರಮ ಕೈಗೊಳ್ಳುವ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಪರೀಕ್ಷಾ ದಿನಗಳಂದು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಪರೀಕ್ಷಾ ಅವಧಿಯಲ್ಲಿ ಕೇಂದ್ರಗಳ ಸುತ್ತ ಮುತ್ತಲಿರುವ ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಕೆಫೆಗಳಿಗೆ ತೆರೆಯಲು ಅವಕಾಶ ಇರುವುದಿಲ್ಲ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತು ಪಡಿಸಿ ಪರೀಕ್ಷಾ ಕೇಂದ್ರದೊಳಗೆ ಅನ್ಯ ವ್ಯಕ್ತಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.



