ದಾವಣಗೆರೆ: ಅಪಘಾತ ಸಂಭವಿಸಿ 5 ವರ್ಷವಾದರೂ ಪರಿಹಾರ ನೀಡದ ಎರಡು ಕೆಎಸ್ ಆರ್ ಟಿಸಿ ಬಸ್ ಗಳನ್ನು ಕೋರ್ಟ್ ಆದೇಶದ ಮೇರೆಗೆ ಸಿಬ್ಬಂದಿ ಜಪ್ತಿ ಮಾಡಿದ್ದಾರೆ.
2019ರಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಳಿ, ಕಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ 1.32 ಕೋಟಿ ರೂ. ಪರಿಹಾರ ನೀಡುವಂತೆ ಕೋರ್ಟ್ ಸೂಚಿಸಿತ್ತು. ಆದರೆ, ಪರಿಹಾರ ಸಿಗದ ಹಿನ್ನೆಲೆಯಲ್ಲಿ ಇದೀಗ ಬಸ್ ಜಪ್ತಿ ಮಾಡಲಾಗಿದೆ.
1.32 ಕೋಟಿ ರೂಪಾಯಿ ಮೃತರ ಕುಟುಂಬಕ್ಕೆ ಪರಿಹಾರವಾಗಿ ನೀಡುವಂತೆ ಕೋರ್ಟ್ ಆದೇಶ ನೀಡಿತ್ತು. ಪರಿಹಾರಕ್ಕಾಗಿ ಮೃತ ಪ್ರಾಧ್ಯಾಪಕನ ಪತ್ನಿ ಪರದಾಡುತ್ತಿದ್ದಾರೆ. ಐದು ವರ್ಷವಾದರೂ ಸಾರಿಗೆ ಇಲಾಖೆ ಪರಿಹಾರ ನೀಡಲಿಲ್ಲ.
ದಾವಣಗೆರೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಎರಡು ಬಸ್ಗಳನ್ನು ಕೋರ್ಟ್ ಸಿಬ್ಬಂದಿ ಜಪ್ತಿ ಮಾಡಿದ್ದಾರೆ. 2019ರ ಮೇ 6ರಂದು ಈ ಘಟನೆ ನಡೆದಿತ್ತು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಳಿಯ ಕಾರ್ ಗೆ ಸಾರಿಗೆ ಇಲಾಖೆ ಬಸ್ ಡಿಕ್ಕಿ ಹೊಡೆದು, ದಾವಣಗೆರೆಯ ಎವಿಕೆ ಕಾಲೇಜ್ ಪ್ರಾಧ್ಯಾಪಕ ನಂಜುಂಡಸ್ವಾಮಿ ಸೇರಿ ಇಬ್ಬರು ಸಾವನ್ನಪ್ಪಿದ್ದರು. ಈ ವೇಳೆ ಓರ್ವನಿಗೆ ಗಂಭೀರ ಗಾಯಗಳಾಗಿತ್ತು.