ದಾವಣಗೆರೆ: ಜೂ.18 ರಂದು ದಾವಣಗೆರೆ ತಾಲ್ಲೂಕಿನ ತಹಶೀಲ್ದಾರ್ ಒಳಗೊಂಡಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಜರೀಕಟ್ಟೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ವಾಸ್ತವ್ಯ ಮಾಡುವರು. ಅಂದು ಜರೀಕಟ್ಟೆ ಗ್ರಾಮದ ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಬಹುದು. ಆದ್ದರಿಂದ ಗ್ರಾಮದ ಎಲ್ಲಾ ಸಾರ್ವಜನಿಕರು ಜೂ.18 ರಂದು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿ ಪರಿಹಾರ ಕಂಡುಕೊಳ್ಳಬಹುದು. ಈ ಸಂದರ್ಭದಲ್ಲಿ ಸಾರ್ವಜನಿಕರು ಕೋವಿಡ್-19ರ ನಿಯಮಾವಳಿಯನ್ವಯ ಮಾಸ್ಕ ಧರಿಸಿ, ಸಾಮಾಜಿಕ ಅಂತರದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದಾವಣಗೆರೆ ತಹಶೀಲ್ದಾರ್ ಬಸನಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಜೂ.18 ರಂದು ಜರೀಕಟ್ಟೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



