ದಾವಣಗೆರೆ: ಆನಗೋಡು ಹೋಬಳಿಯಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸಲು ಕೈಗಾರಿಕೆ ಅಭಿವೃದ್ಧಿ ನಿಗಮ ಅನುಮೋದನೆ ನೀಡಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಗಜೆಟೆಡ್ ಅಧಿಸೂಚನೆ ಬಂದ ಮೇಲೆ ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ ಎಂದು ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದರು. 2300 ಎಕರೆ ಪ್ರದೇಶದಲ್ಲಿ ಕಾರಿಡಾರ್ ನಿರ್ಮಿಸಲು ಯೋಜನೆ ತಯಾರಿಸಲಾಗಿದೆ. ಪ್ರಥಮ ಹಂತದಲ್ಲಿ 1256 ಎಕರೆಗೆ ಅನುಮೋದನೆ ಸಿಕ್ಕಿದೆ ಎಂದರು.
ಈ ಪ್ರದೇಶ ಮುಂದೆ ವಿಮಾನ ನಿಲ್ದಾಣ ನಿರ್ಮಾಣಗೊಳ್ಳಲಿರುವ ಪ್ರದೇಶಕ್ಕೆ ಹತ್ತಿರವಿದೆ. ಕರೂರು ಕೈಗಾರಿಕಾ ಪ್ರದೇಶದ ನಿವೇಶನಗಳಿಗೆ ಕ್ರಯಪತ್ರ ಒದಗಿಸಲು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.



