Connect with us

Dvg Suddi-Kannada News

ದಾವಣಗೆರೆ: ಕೆನರಾ ಬ್ಯಾಂಕ್ ನಿಂದ ಸಂತ್ರಸ್ತರಿಗೆ ಉಚಿತ ಆಹಾರ ವಿತರಣೆ‌

ದಾವಣಗೆರೆ

ದಾವಣಗೆರೆ: ಕೆನರಾ ಬ್ಯಾಂಕ್ ನಿಂದ ಸಂತ್ರಸ್ತರಿಗೆ ಉಚಿತ ಆಹಾರ ವಿತರಣೆ‌

ದಾವಣಗೆರೆ: ಕೆನರಾ ಬ್ಯಾಂಕ್ ದೇಶಕ್ಕಾಗಿ ಹಣಕಾಸು ಸೇವೆಯನ್ನು ಸಲ್ಲಿಸುವುದರ ಜೊತೆಗೆ ಸಾಮಾಜಿಕ  ಜವಾಬ್ದಾರಿಯಿಂದ ಸಮಾಜ ಸೇವೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ. ಇದು ಇತರ ಹಣಕಾಸು ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಎಸ್.ಟಿ‌. ವೀರೇಶ್  ಮೆಚ್ಚುಗೆ ವ್ಯಕ್ತಪಡಿಸಿದರು.

ಕೆನರಾ ಬ್ಯಾಂಕ್  ನಿಂದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ್ದ ಕೊರೊನಾ  ಸಂತ್ರಸ್ತರು,  ವಾರಿಯರ್ಸ್ ಮತ್ತು ಸಂತ್ರಸ್ಥ ಸಬಂಧಿಗಳಿಗೆ  ಉಚಿತ ಆಹಾರ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.  ಕೊರೊನಾ ಸಂಕಷ್ಟ ಕಾಲದಲ್ಲಿ ಅನೇಕ ಸಂಘ ಸಂಸ್ಥೆಗಳು ಸೇವಾ ಮತ್ತು ಮಾನವೀಯ ನೆಲೆಗಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸರಕಾರದೊಂದಿಗೆ ಕೈಜೋಡಿಸಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿವೆ. ಇದರಿಂದ ಸರಕಾರದ ಕೆಲಸ ಸ್ವಲ್ಪ ಸುಲಭವಾಗಿದೆ. ಬ್ಯಾಂಕ್ ಉದ್ಯೋಗಿಗಳು ಸಹ ಕೋರೋನಾ ಅಪಾಯದ ಸಂದರ್ಭದಲ್ಲಿಯೂ ತಮ್ಮ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದಾರೆ. ಜೊತೆಗೆ ಸಾಮಾಜಿಕ ಕೈಂಕರ್ಯದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದರು.

ಆಹಾರ ವಿತರಣಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೆನರಾ ಬ್ಯಾಂಕಿನ ಕ್ಷೇತ್ರೀಯ ಕಾರ್ಯಾಲಯದ ವಿಭಾಗೀಯ ಪ್ರಬಂಧಕರಾದ ಜಿ.ಆರ್.ನಾಗರತ್ನ ಅವರು ಮಾತನಾಡಿ ಕೆ‌ನರಾ ಬ್ಯಾಂಕ್ ತನ್ನ ಸಾಮಾಜಿಕ ಭಾದ್ಯತೆಯ ಭಾಗವಾಗಿ ಕೋರೋನಾ ಜಾಗೃತಿ ಅಭಿಯಾನ, ಉಚಿತವಾಗಿ ಆಹಾರ ವಿತರಣೆ, ಮಾಸ್ಕ್ ವಿತರಣೆ, ಸಾನಿಟೈಸರ್ ವಿತರಣೆಗಳ ಜೊತೆಗೆ ಜಿಲ್ಲಾಸ್ಪತ್ರೆಗೆ ಅಗತ್ಯ ಸಲಕರಣೆಗಳನ್ನೂ ಕೊಡುಗೆಯಾಗಿ ನೀಡಿದೆ. ಕೋರೋನಾ ಸಂತ್ರಸ್ತರಿಗೆ ಮತ್ತು ಆಸ್ಪತ್ರೆಗಳಿಗೆ ಹಲವಾರು ಸಾಲ ಯೋಜನೆಗಳನ್ನೂ ಜಾರಿದೆ ತಂದಿದೆ. ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಲು ಮನವಿ ಮಾಡಿದರು.

ಇಂದಿನ ಈ ಆಹಾರ ವಿತರಣಾ ಕಾರ್ಯಕ್ರಮದಲ್ಲಿ ಮಹಾನಗರ ‌ಪಾಲಿಕೆಯ ನಾಮನಿರ್ದೇಶಿತ ಸದಸ್ಯರಾದ ಶಿವನಗೌಡ ಟಿ ಪಾಟೀಲ್, ಕೆ‌.ರಾಘವೇಂದ್ರ ನಾಯರಿ, ಕೆನರಾ ಬ್ಯಾಂಕ್ ಹಿರಿಯ ಅಧಿಕಾರಿಗಳಾದ ಎಸ್.ವಿ.ರಾಮಕೃಷ್ಣ ನಾಯ್ಕ್, ಬಿ.ಎ.ಸುರೇಶ್, ಹಂಪಣ್ಣ, ಕೆ.ಶಶಿಕುಮಾರ್,  ಕೆ.ವಿಶ್ವನಾಥ ಬಿಲ್ಲವ, ಆರ್.ಆಂಜನೇಯ, ಸಿ.ಪರಶುರಾಮ್ ಮತ್ತಿತರರು ಉಪಸ್ಥಿತರಿದ್ದರು

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top