ದಾವಣಗೆರೆ: ಹೊನ್ನಾಳಿ ಪುರಸಭೆ ವತಿಯಿಂದ 2022-23ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ವ್ಯಕ್ತಿಗತ ಉದ್ಯಮಶೀಲತೆ (ಸಾಲ ಮತ್ತು ಬಡ್ಡಿ ಸಹಾಯಧನ), ಗುಂಪು ಉದ್ಯಮ ಕಾರ್ಯಕ್ರಮದಡಿ ಗುಂಪು ಉದ್ಯಮ ಕೈಗೊಳ್ಳಲು ಎಸ್.ಎಚ್.ಜಿ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಕಾರ್ಯಕ್ರಮದಡಿ ಸಾಲ ಪಡೆಯಲು ಆಸಕ್ತಿಯುಳ್ಳ ಬಡತನ ರೇಖೆಗಿಂತ ಕೆಳಗಿರುವ ಹೊನ್ನಾಳಿ ಪಟ್ಟಣ ವ್ಯಾಪ್ತಿಯಲ್ಲಿ ಬರುವ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಫಲಾನುಭವಿಗಳು ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಅನುಭವ ಪ್ರಮಾಣ ಪತ್ರ ಇತ್ಯಾದಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪತ್ರಿಯೊಂದೊಗೆ ಜೂನ್.30 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಡೇ-ನಲ್ಮ್ ಶಾಖೆಯಲ್ಲಿ ವಿಚಾರಿಸಬಹುದಾಗಿದೆ ಎಂದು ಹೊನ್ನಾಳಿ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.