ದಾವಣಗೆರೆ: ಇತ್ತೀಚಿಗೆ ಹಿಮಾಚಲ ಪ್ರದೇಶದ ಸೋಲಾನ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ KUDO ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಸಮೀಪದ ಕೆಂಗಾಪುರ ಎಂಬ ಪುಟ್ಟ ಗ್ರಾಮದ ಯುವ ಪ್ರತಿಭೆ ತನುಜಾ ಅವರು ಚಿನ್ನದ ಪದಕ ಗೆದ್ದಿದ್ದಾರೆ. ತನುಜಾ ಅವರು ಸತೀಶ್. ಹೆಚ್.ಆರ್ ( ಶಿಕ್ಷಕರು ) ಮತ್ತು ಕವಿತಾ ದಂಪತಿಯ ಪುತ್ರಿಯಾಗಿದ್ದಾರೆ.
ಶಿಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪದಕ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು. ಕೆಂಗಾಪುರ ರಾಮಲಿಂಗೇಶ್ವರ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಇವರು ಮೂರು ವರ್ಷಗಳಿಂದ ದಿಡಗೂರ್ ಅಂಬೇಡ್ಕರ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.



