ದಾವಣಗೆರೆ: 2022-23ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಅರ್ಹ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳನ್ನು ದಾವಣಗೆರೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಾರ್ಯಾಲಯ ಜಿಲ್ಲಾ ಕ್ರೀಡಾಂಗಣ ಕಛೇರಿಯಲ್ಲಿ ಪಡೆಯಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ.16 ರ ಒಳಗಾಗಿ ಸಲ್ಲಿಸತಕ್ಕದ್ದು, ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 08192-237480 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.



