ದಾವಣಗೆರೆ: ಸಹೋದರರ ನಡುವಿನ ಜಮೀನು ವಿವಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತಹಶೀಲ್ದಾರ್ ಕಚೇರಿ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಕಚೇರಿಮುಂದೆ ಈ ಘಟನೆ ನಡೆದಿದ್ದು, ಶಿವಮೊಗ್ಗ ತಾಲೂಕಿನ ನಾರಾಯಣಪುರ ಗ್ರಾಮದ ಪಂಚಾಯತ್ ಸದಸ್ಯ ಲೋಕೇಶ್ ನಾಯ್ಕ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ನ್ಯಾಮತಿ ತಾಲೂಕಿನ ಲಕ್ಕಿನಕೊಪ್ಪ ಗ್ರಾಮದಲ್ಲಿರುವ 4 ಎಕರೆ ಜಮೀನು ವಿಚಾರವಾಗಿ ಲೋಕೇಶ್ ನಾಯ್ಕ್ ಹಾಗೂ ಸಹೋದರ ಮಧ್ಯೆ ವ್ಯಾಜ್ಯವಿತ್ತು. ಈ ವ್ಯಾಜ್ಯ ನ್ಯಾಮತಿ ತಹಶೀಲ್ದಾರ್ ಕೋರ್ಟ್ನಲ್ಲಿ ಇಂದು ವಿಚಾರಣೆ ನಡೆಸಿ ತೀರ್ಪು ನೀಡಲಾಯಿತು. ತನ್ನ ಪರವಾಗಿ ತೀರ್ಪು ಬರಲಿಲ್ಲ ಎಂಬ ಕಾರಣಕ್ಕೆಲೋಕೇಶ್ ತಹಶೀಲ್ದಾರ್ ಕಚೇರಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು.
ಅಲ್ಲೇ ಇದ್ದ ಜನರು ಆತ್ಮಹತ್ಯೆಗೆ ಯತ್ನಿಸಿದ ಲೋಕೆಶ್ನನ್ನು ತಡೆದು ಕೂಡಲೇ ಆಸ್ಪತ್ರೆಗೆ ದಾಕಲಿಸಿದ್ದಾರೆ. ಸ್ಥಳಕ್ಕೆ ನ್ಯಾಮತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



