ದಾವಣಗೆರೆ: ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ಮತ್ತು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಹಾಗೂ ಸಹಕಾರ ಇಲಾಖೆ (ಪ್ರ) ಎಸ್.ಆರ್.ಉಮಾಶಂಕರ್ ಇವರು ಜು.02 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜು.02 ರಂದು ಬೆ.08 ಕ್ಕೆ ಬೆಂಗಳೂರಿನಿಂದ ಹೊರಟು 11.30ಕ್ಕೆ ಜಿಲ್ಲಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಹವಾಮಾನ ಪರಿಸ್ಥಿತಿ ಹಾಗೂ ಕೋವಿಡ್ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸುವರು. ನಂತರ ಮ.01 ಕ್ಕೆ ಜಿಲ್ಲಾ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸುವರು. ನಂತರ 03.30ಕ್ಕೆ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್‍ನ 26ನೇ ನಿರ್ದೇಶಕರ ಮಂಡಳಿ ಸಭೆಯಲ್ಲಿ ಭಾಗವಹಿಸುವರು. ಅದೇ ದಿನ ಸ.07 ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಪ್ರಧಾನ ಕಾರ್ಯದರ್ಶಿಯವರ ಹಿರಿಯ ಆಪ್ತ ಕಾರ್ಯದರ್ಶಿ ಕಂದಾಯ ಇಲಾಖೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.