Connect with us

Dvgsuddi Kannada | online news portal | Kannada news online

ದಾವಣಗೆರೆ: ಜು.15: ವಿಶ್ವ ಯುವ ಕೌಶಲ್ಯ ದಿನಾಚರಣೆಯ ಪ್ರಯುಕ್ತ ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

davangerer bord

ದಾವಣಗೆರೆ

ದಾವಣಗೆರೆ: ಜು.15: ವಿಶ್ವ ಯುವ ಕೌಶಲ್ಯ ದಿನಾಚರಣೆಯ ಪ್ರಯುಕ್ತ ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ದಾವಣಗೆರೆ: ಜು. 15 ರಂದು ವಿಶ್ವ ಯುವ ಕೌಶಲ್ಯ ದಿನಾಚರಣೆಯ ಪ್ರಯುಕ್ತವಾಗಿ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಪ್ರಬಂಧದ ಮಾಧ್ಯಮ: ಕನ್ನಡ ಅಥವಾ ಆಂಗ್ರ ಭಾಷೆ, ಯಾವುದಾದರೂ ಒಂದು ವಿಷಯವನ್ನು ಆಯ್ಕೆ ಮಾಡಿಕೊಳ್ಳಬಹುದು) ಪದವಿಪೂರ್ವ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ
ಕೈಗಾರಿಕೆ-ಶೈಕ್ಷಣಿಕ ಒಗ್ಗೂಡಿಕೆಯಿಂದ ಕೌಶಲ್ಯದ ಅಂತರವನ್ನು ಕಡಿಮೆ ಮಾಡುವುದು. ಶಕ್ತಿಯುತ ಹಾಗೂ ಸುಸ್ಥಿರ ಬೆಳವಣಿಗಾಗಿ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಸೃಷ್ಠಿಸುವ ಮಾರ್ಗಗಳು. ಕೌಶಲ್ಯ ಮತ್ತು ಸಾಮರ್ಥ್ಯಗಳ ಮೇಲೆ ಕೇಂದ್ರಿಕತವಾದ ಉನ್ನತ ಶಿಕ್ಷಣದ ಬಗ್ಗೆ ಮರುಚಿಂತನೆ.

8 ರಿಂದ 12 ನೇ ತರಗತಿ/ಐಟಿಐ ವಿದ್ಯಾರ್ಥಿಗಳಿಗೆ ಯುವಕರಲ್ಲಿ ಕೌಶಲ್ಯಾಭಿವೃದ್ಧಿಯ ಪ್ರಾಮುಖ್ಯತೆ, ಶಿಕ್ಷಣದಲ್ಲಿ ಕೌಶಲ್ಯಾಭಿವೃದ್ಧಿಯ ಪ್ರಾಮುಖ್ಯತೆ ವಿಷಯದ ಕುರಿತು ಪದ ಮಿತಿಯು 1000-1200 ಪದಗಳಿಗೆ ಮೀರದಂತೆ ಇರಬೇಕು. ವೆಬ್‍ಸೈಟ್:https/www.kaushalkar.com/app/skill-essay-competition ಲಿಂಕ್ ಮೂಲಕ ಕಳಿಸಬಹುದು.

ಜಿಲ್ಲಾ ಮಟ್ಟದ ಪದವಿ ಪೂರ್ವ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿಜೇತರಿಗೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ಜೊತೆಯಲ್ಲಿ ಇರುವ ಅವಕಾಶ ಕಲ್ಪಿಸಲಾಗುವುದು. ಪ್ರಬಂಧ ಸಲ್ಲಿಕೆಗೆ ಜುಲೈ.10 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾಡಳಿತ ಭವನ, 1ನೇ ಮಹಡಿ, ಕೊಠಡಿ ಸಂಖ್ಯೆ-24, ದಾವಣಗೆರೆ ದೂರವಾಣಿ ಸಂಖ್ಯೆ:08192-259447/8971749636 ಯನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top