ದಾವಣಗೆರೆ: ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಲಯನ್ ಎ.ಆರ್.ಉಜ್ಜನಪ್ಪ ಆಯ್ಕೆಗೊಂಡಿದ್ದಾರೆ.
ಇತ್ತೀಚೆಗೆ ದಾವಣಗೆರೆ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ 13 ನಿರ್ದೇಶಕರುಗಳ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ಹಿನ್ನಲೆಯಲ್ಲಿ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಲಯನ್ ಎ.ಆರ್.ಉಜ್ಜನಪ್ಪ ಅವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಮಾಜಮುಖಿ ವ್ಯಕ್ತಿತ್ವದ ಲಯನ್ ಎ ಆರ್ ಉಜ್ಜನಪ್ಪ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ.
ಪ್ರಮುಖವಾಗಿ ದಾವಣಗೆರೆ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ, ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಧ್ಯಕ್ಷರಾಗಿ, ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ ಲಯನ್ಸ್ ಸಂಸ್ಥೆಯಲ್ಲಿ ಜಿಲ್ಲಾ ಗವರ್ನರ್ ಆಗಿಯೂ ದಕ್ಷತೆಯಿಂದ ಕೆಲಸ ನಿರ್ವಹಿಸಿ ಹೆಸರು ಮಾಡಿದ್ದಾರೆ. ಈಗ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ, ಗೌರವ ಕಾರ್ಯದರ್ಶಿಗಳಾದ ಬಿ.ದಿಳ್ಯಪ್ಪ, ರೇವಣಸಿದ್ದಪ್ಪ ಅಂಗಡಿ ಮತ್ತು ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಅಭಿನಂದಿಸಿದ್ದಾರೆ.