Connect with us

Dvgsuddi Kannada | online news portal | Kannada news online

ಕ್ರೀಡಾ ಇಲಾಖೆಯಲ್ಲಿನ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಲು ಈ ನಂಬರ್ ಗೆ ಕರೆ ಮಾಡಿ

ದಾವಣಗೆರೆ

ಕ್ರೀಡಾ ಇಲಾಖೆಯಲ್ಲಿನ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಲು ಈ ನಂಬರ್ ಗೆ ಕರೆ ಮಾಡಿ

ದಾವಣಗೆರೆ: ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಲು ಪ್ರಸಕ್ತ ಸಾಲಿನಲ್ಲಿ ‘ಯುವ ಸಹಾಯವಾಣಿ 155-265’ ಎಂಬ ವಿಶಿಷ್ಟ ಸಂಖ್ಯೆಗೆ  ಚಾಲನೆ ನೀಡಲಾಗಿದೆ.

ಯುವಜನರನ್ನು ತಲುಪಿ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಸಕಾಲದಲ್ಲಿ ಒದಗಿಸಲು, ಸರ್ಕಾರ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಇರುವ ಅವಕಾಶಗಳ ಬಗ್ಗೆ ಮಾಹಿತಿಯನ್ನು ಒದಗಿಸಲಾಗುವುದು.  ಅಪಾಯಕರ ಸಂದರ್ಭಗಳಲ್ಲಿರುವ ಮತ್ತು ಮಾನಸಿಕ ಒತ್ತಡದ ಸಂದರ್ಭಗಳಲ್ಲಿರುವ ಯುವಜನರಿಗೆ ಸ್ಥೈರ್ಯ ಒದಗಿಸಲು ಆಪ್ತ ಸಮಾಲೋಚನೆಗೆ ಸಹಾಯ, ಯುವಜನರಿಗೆ ಸಂದರ್ಭೋಚಿತವಾದ ಅಗತ್ಯ ಕೌಶಲ್ಯ ಮತ್ತು ತರಬೇತಿಗಳ ಮಾಹಿತಿ ಪಡೆಯಲು ಮತ್ತು ಅಗತ್ಯ ಕೌಶಲ್ಯಭಿವೃದ್ಧಿ ಕಾರ್ಯಕ್ರಮಗಳ ಸದುಪಯೋಗ ಪಡೆಯುವಂತೆ ಪ್ರೋತ್ಸಾಹಿಸಲು ಉದ್ದೇಶಿಸಲಾಗಿದೆ.

ಯುವಜನರಿಗೆ ಅಗತ್ಯವಿರುವ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸೌಲಭ್ಯಗಳ ಬಗ್ಗೆ ಯುವ ಸಹಾಯವಾಣಿ -155-256 ಸಂಖ್ಯೆಗೆ ಕರೆ ಮಾಡಿ ಮಾಹಿತಿ ತಿಳಿದುಕೊಳ್ಳಬಹುದಾಗಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top