Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ಅರಿವು ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ) ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ವಿಶ್ವಕರ್ಮ ಸಮುದಾಯದ ಅರ್ಜಿದಾರರುಗಳು ಸಾಲ/ಸೌಲಭ್ಯ ಕೋರಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್.20 ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಸುವಿಧಾ ತಂತ್ರಾಂಶದ Suvida.karnataka.gov ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯನ್ನು ಅಥವಾ ನಿಗಮದ ವೆಬ್‍ಸೈಟ್
https://kvcdcl.karnataka.gov.in ಸಹಾಯವಾಣಿ ಸಂಖ್ಯೆ: 08192-230934 ಅನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎನ್.ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top