Connect with us

Dvgsuddi Kannada | online news portal | Kannada news online

ದಾವಣಗೆರೆ: ಜು.21ರಂದು ಲೋಕಾಯುಕ್ತ ಪೊಲೀಸರಿಂದ ಸಾರ್ವಜನಿಕರಿಂದ ದೂರು ಸ್ವೀಕಾರ

ದಾವಣಗೆರೆ

ದಾವಣಗೆರೆ: ಜು.21ರಂದು ಲೋಕಾಯುಕ್ತ ಪೊಲೀಸರಿಂದ ಸಾರ್ವಜನಿಕರಿಂದ ದೂರು ಸ್ವೀಕಾರ

ದಾವಣಗೆರೆ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜು.21 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶರಾದ ಪ್ರವೀಣ ನಾಯಕ್ ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆ ಜು.21 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.

ಸಾರ್ವಜನಿಕರು ತಾಲ್ಲೂಕು ಮತ್ತು ಜಿಲ್ಲೆಯ ಸರಕಾರಿ ಕಾರ್ಯಾಲಯಗಳಲ್ಲಿ ನಡೆಯುತ್ತಿರುವ ದುರಾಡಳಿತ, ವಿಳಂಬ ನೀತಿ, ಹಣ ದುರುಪಯೋಗ , ಸರಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾರತಮ್ಯ ನೀತಿ ಅವುಸರಿದುವುದರ ಕುರಿತು ದೂರುಗಳನ್ನು ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top