Connect with us

Dvgsuddi Kannada | online news portal | Kannada news online

ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ:  ಸಮಾಜ ಕಲ್ಯಾಣ ಇಲಾಖೆಯಿಂದ 6ನೇ ತರಗತಿಯಿಂದ 10ನೇ ತರಗತಿವರೆಗೆ ಪ್ರತಿಷ್ಠಿತ ಶಾಲೆಗಳಲ್ಲಿ ಉಚಿತವಾಗಿ ಶಿಕ್ಷಣ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

5ನೇ ತರಗತಿಯಲ್ಲಿ ಕನಿಷ್ಠ ಶೇ.60 ರಷ್ಟು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಶಾಲೆಗಳಲ್ಲಿ ದಾಖಲಿಸಿ, 6ನೇ ತರಗತಿಯಿಂದ 10 ನೇ ತರಗತಿವರೆಗೆ ಉಚಿತವಾಗಿ ಶಿಕ್ಷಣ ನೀಡಲಾಗುವುದು.  ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದ್ದು, ಅಂದು ಸಂಜೆ 5.30 ರೊಳಗೆ ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ www.sw.kar.nic.in ಮೂಲಕ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top