Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಹಾಗೂ ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಹಾಗೂ ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನ ಮತ್ತು ಪುಸ್ತಕ ಅನುದಾನದ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಒಂದನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ಓದುವವರಿಗೆ ಪುಸ್ತಕ ಅನುದಾನ ಹಾಗೂ ಪದವಿ ಮತ್ತು ಡಿಪೆÇ್ಲೀಮಾ ಜೆ.ಓ.ಸಿ, ಪ್ರೊಫೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳು ಅರ್ಜಿ ಸಲ್ಲಿಸಬಹುದು.ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಶುಲ್ಕರಹಿತವಾಗಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ, ನಿಗದಿತ ದಾಖಲಾತಿಗಳೊಂದಿಗೆ ನವೆಂಬರ್.30 ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿ ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ 08182-220925 ಯನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು(ಪ್ರಭಾರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top