Connect with us

Dvgsuddi Kannada | online news portal | Kannada news online

ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಹರ್ ಘರ್ ತಿರಂಗಾ’ ಅಭಿಯಾನ

ದಾವಣಗೆರೆ

ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಹರ್ ಘರ್ ತಿರಂಗಾ’ ಅಭಿಯಾನ

ದಾವಣಗೆರೆ: ಭಾರತ ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ಅಂಗವಾಗಿ ದೇಶದ ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿಯನ್ನು ಅಭಿವ್ಯಕ್ತಗೊಳಿಸಲು ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಿದ್ದು, ಸಾರ್ವಜನಿಕರು ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.

ಜಿಲ್ಲಾಡಳಿತ ಭವನದ ಅಪರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಮತ್ತು ಡಾ.ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆ ಆಚರಿಸುವ ಸಲುವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13 ರಿಂದ 15 ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಜಿಲ್ಲೆಯ ಪ್ರತಿ ಗ್ರಾಮ, ನಗರ, ಪಟ್ಟಣಗಳಲ್ಲಿ ಸ್ಥಳೀಯ ಆಡಳಿತವು ಅಭಿಯಾನದ ಜವಬ್ದಾರಿ ವಹಿಸಿಕೊಂಡು ಶಾಲಾ-ಕಾಲೇಜು ವಿದ್ಯಾರ್ಥಿಗಳ ಮೂಲಕ ಪ್ರಬಾತ್ ಪೇರಿ ಆಯೋಜಿಸಿ ಜನರಲ್ಲಿ ಅಭಿಯಾನದ ಕುರಿತು ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳಿಂದ ವಂದೇ ಮಾತರಂ, ರಘುಪತಿ ರಾಘವ ರಾಜರಾಂ ಮತ್ತು ಇನ್ನಿತರೆ ದೇಶಭಕ್ತಿ ಗೀತೆಗಳನ್ನು ಹಾಡಿಸಬೇಕು. ಸ್ಥಳೀಯ ಮಟ್ಟದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಸಾಹಿತಿಗಳು, ಕ್ರೀಡಾ ಪಟುಗಳ ಮೂಲಕ ಉಪನ್ಯಾಸ ಏರ್ಪಡಿಸಿ ಸಾರ್ವಜನಿಕರಿಗೆ ಸ್ವಾತಂತ್ರ್ಯ ಹೋರಾಟದ ತ್ಯಾಗ-ಬಲಿದಾನದ ಕುರಿತು ಅರಿವು ಮೂಡಿಸಬೇಕು ಎಂದರು.

ಸರ್ಕಾರಿ ಕಚೇರಿ ಕಟ್ಟಡಗಳು, ಸರ್ಕಾರೇತರ ಸಂಘ-ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಲು ಕ್ರಮ ವಹಿಸಬೇಕು. ದಿನ ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಪಡಿಸಬೇಕು. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಸರ್ಕಾರಿ ಸಾರಿಗೆ ಹಾಗೂ ವಾಹನಗಳ ಮೇಲೆ ಅಭಿಯಾನದ ಕುರಿತು ಪ್ರದರ್ಶನ ಮಾಡುವುದು. ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಜಿಲ್ಲೆಯ ಹೆಸರಾಂತ ಸಾಹಿತಿಗಳು, ಕಲಾವಿದರು, ಕ್ರೀಡಾಪಟುಗಳು ಹಾಗೂ ಇನ್ನಿತರೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಂದ ಹೇಳಿಕೆಗಳನ್ನು ಪಡೆದು ಹರ್ ಘರ್ ತಿರಂಗಾ ಅಭಿಯಾನದ ಬಗ್ಗೆ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.

ಪ್ರಸಕ್ತ ವರ್ಷದಿಂದ ಆಗಷ್ಟ್ 01 ರಂದು ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನವನ್ನು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಣೆ ಮಾಡಲು ಸರ್ಕಾರವು ಆದೇಶ ಮಾಡಿರುವುದರಿಂದ, ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಬೇಕು. ಜಾಥಾ ಏರ್ಪಡಿಸಿ ಮಾದಕ ವಸ್ತುಗಳ ಬಗ್ಗೆ ಸಾರ್ವಜನಿಕವಾಗಿ ಜನರಿಗೆ ಜಾಗೃತಿ ಮೂಡಿಸಬೇಕು. ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಕಡ್ಡಾಯವಾಗಿ ಗಣ್ಯರಿಂದ ವಿಶೇಷ ಉಪನ್ಯಾಸ ಆಯೋಜಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಜಿ.ಪಂ ಸಿಇಒ ಡಾ.ಎ.ಚನ್ನಪ್ಪ ಮಾತನಾಡಿ, ಹರ್ ಘರ್ ತಿರಂಗಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಗ್ರಾಮೀಣ ಪ್ರದೇಶದ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿಗಳು ಸ್ವ-ಸಹಾಯ ಸಂಘಗಳು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಉಪಕೇಂದ್ರ ಒಳಗೊಂಡಂತೆ ಎಲ್ಲಾ ಕಚೇರಿಗಳಲ್ಲಿ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಸಾರ್ವಜನಿಕರು ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕ್ರಮವಹಿಸಬೇಕು. ತಮ್ಮ ತಮ್ಮ ಮನೆಯ ಮೇಲೆ ಕುಟುಂಬದೊಂದಿಗೆ ರಾಷ್ಟ್ರಧ್ವಜಾರೋಹಣ ಮಾಡುವಂತೆ ಪೆÇೀಷಕರಿಗೆ ತಿಳಿಸಲು ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಲ್ಲಿ ಅರಿವು ಮೂಡಿಸಲು ಪ್ರತಿದಿನ ಬೆಳಿಗ್ಗೆ ಜರುಗುವ ಪ್ರಾರ್ಥನಾ ಸಮಯದಲ್ಲಿ ಶಾಲಾ ಕಾಲೇಜುಗಳಿಂದ ಧ್ವಜಾರೋಹಣದ ಮಹತ್ವ ತಿಳಿಸಲು ಕ್ರಮವಹಿಸಬೇಕೆಂದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಅಪರ ಜಿಲ್ಲಾಧಿಕಾರಿ ಲೋಕೇಶ್ ಪಿ.ಎನ್, ಉಪವಿಭಾಗಾಧಿಕಾರಿಗಳಾದ ದುರ್ಗಾಶ್ರೀ, ತಿಮ್ಮಣ್ಣ, ಮಹಾನಗರ ಪಾಲಿಕೆಯ ಆಯುಕ್ತ ವಿಶ್ವನಾಥ್ ಮುದಜ್ಜಿ, ಸ್ಮಾರ್ಟ್‍ಸಿಟಿ ಎಂ.ಡಿ ರವೀಂದ್ರ ಮಲ್ಲಾಪುರ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ನಜ್ಮಾ, ಡಿ.ಡಿ.ಪಿ.ಐ. ತಿಪ್ಪೇಶಪ್ಪ, ಜಿಲ್ಲಾ ವಾರ್ತಾಧಿಕಾರಿ ಅಶೋಕ್ ಕುಮಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top