ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವತಿಯಿಂದ ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ “ಅಮರ್ ಜವಾನ್” ಹುತಾತ್ಮ ವೀರ ಯೋಧರ ಉದ್ಯಾನವನದ ಬಳಿ ನೂತನವಾಗಿ ವೀರಚಕ್ರ ಪುರಸ್ಕೃತ ಕರ್ನಲ್ ಎಂ.ಬಿ.ರವೀಂದ್ರನಾಥ್ ವೃತ್ತವನ್ನು ಸಂಸದ ಜಿ.ಎಂ ಸಿದ್ದೇಶ್ವರ ಉದ್ಘಾಟಿಸಿ, ಹುತಾತ್ಮ ವೀರ ಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎ.ರವೀಂದ್ರನಾಥ್, ಮೇಯರ್ ಜಯಮ್ಮ ಗೋಪಿನಾಯ್ಕ್, ಉಪ ಮೇಯರ್ ಗಾಯತ್ರಿಬಾಯಿ ಖಂಡೋಜಿರಾವ್, ಧೂಡಾ ಅಧ್ಯಕ್ಷ ಕೆ.ಎಂ.ಸುರೇಶ್, ಧೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.