ದಾವಣಗೆರೆ: 2022-23 ನೇ ಸಾಲಿನಲ್ಲಿ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ (ನಿ) ದ ವತಿಯಿಂದ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್‍ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡರ್, ನಾಮದಾರಿಗೌಡ, ಉಪ್ಪಿನ ಕೊಳಗ/ಉತ್ತಮ ಕೊಳಗ ಒಕ್ಕಲಿಗ ಸಮುದಾಯದವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸೌಲಭ್ಯಗಳನ್ನು ಪಡೆಯಲಿಚ್ಚಿಸುವ ಫಲಾಪೇಕ್ಷಿಗಳು ಅರ್ಜಿಸಲ್ಲಿಸಲು ಆಗಸ್ಟ್.18 ಕಡೇ ದಿನಾಂಕ ವಾಗಿರುತ್ತದೆ.
ಯೋಜನೆಗಳು ಮತ್ತು ಸೌಲಭ್ಯಗಳು:
ಒಕ್ಕಲಿಗ ಸಮುದಾಯದವರು ಸ್ವಯಂ ಉದ್ಯೋಗಕ್ಕೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಸ್ವಯಂ ಉದ್ಯೋಗ ಸಾಲ ಯೋಜನೆ. ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ/ಸರಕು ಸಾಗಾಣಿಕೆ ವಾಹನ ಕೊಳ್ಳಲು ಸಹಾಯಧನ ಯೋಜನೆ. ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನುಗಳಿಗೆ ಗಂಗಾ ಕಲ್ಯಾಣ ಯೋಜನೆ. ಹಾಗೂ ಸಮುದಾಯದ ಯುವಜನತೆಯನ್ನು ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗ ಮುಖಿಯನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ITIs, GTTC, KGTTI ಇತ್ಯಾದಿಗಳಲ್ಲಿ ಅಲ್ಪಾವಧಿ ಕೋರ್ಸುಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯನ್ನು ರೂಪಿಸಿದೆ. ಯೋಜನೆಗೆ ಆನ್‍ಲೈನ್ ಮೂಲಕ “ಸುವಿಧಾ” ಪೋರ್ಟಲ್ https://suvidha.karnataka.gov.in ಮತ್ತು ಕೌಶಲ್ಯ ಕರ್ನಾಟಕ ಪೋರ್ಟಲ್ https://www.kaushalkar.com ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ವೆಬ್‍ಸೈಟ್ https://kvcdc.karnataka.gov.in ನಲ್ಲಿ ಅಥವಾ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ: 080-29904268 ನ್ನು / ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 08192 230934 ನ್ನು ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ), ಕುರುಬರ ಹಾಸ್ಟೆಲ್ ಕಟ್ಟಡ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ ಕಚೇರಿಯನ್ನು ಸಂಪರ್ಕಿಸನಹುದು ಎಂದು ದಾವಣಗೆರೆ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.