ದಾವಣಗೆರೆ: ಎಲ್ಲಾ ಲಾಡ್ಜ್, ಕಲ್ಯಾಣ ಮಂಟಪ, ಶಾದಿ ಮಹಲ್ ಗಳಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಠಿಯಿಂದ ಎಲ್ಲಾ ಕಡೆ ಸಿ.ಸಿ ಟಿವಿ ಕ್ಯಾಮರಾ ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಜಿಲ್ಲಾ ಪೊಲೀಸರು ಸುಚಿಸಿದ್ದಾರೆ.
ನಗರದ ರೋಟರಿ ಕ್ಲಬ್ ನಲ್ಲಿ ದಾವಣಗೆರೆ ಮಹಾನಗರ ವ್ಯಾಪ್ತಿಯ ಎಲ್ಲಾ ಲಾಡ್ಜ್ ಮತ್ತು ಕಲ್ಯಾಣ ಮಂಟಪ, ಶಾದಿ ಮಹಲ್ ಗಳ ಮಾಲೀಕರೊಂದಿಗೆ ದಾವಣಗೆರೆ ನಗರ ಉಪ ವಿಭಾಗದ ಡಿ.ವೈ.ಎಸ್.ಪಿ ನರಸಿಂಹ ವಿ. ತಾಮ್ರಧ್ವಜ ಸಭೆ ನಡೆಸಿದರು. ಈ ವೇಳೆ PUBLIC SEFETY ACT-2017 ಬಗ್ಗೆ ಮಾಹಿತಿ ನೀಡಿ ಎಲ್ಲಾ ಲಾಡ್ಜ್, ಕಲ್ಯಾಣ ಮಂಟಪ, ಶಾದಿ ಮಹಲ್ ಗಳಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಠಿಯಿಂದ ಎಲ್ಲಾ ಕಡೆ ಸಿ.ಸಿ ಟಿವಿ ಕ್ಯಾಮರಾ ಕಡ್ಡಾಯವಾಗಿ ಅಳವಡಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಸಿಪಿಐ ಗಜೇಂದ್ರಪ್ಪ, ಪಿಐ ನಾಗಪ್ಪ ಮತ್ತು ನಗರ ಉಪ ವಿಭಾಗದ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.