Connect with us

Dvgsuddi Kannada | online news portal | Kannada news online

ದಾವಣಗೆರೆ: ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

ದಾವಣಗೆರೆ

ದಾವಣಗೆರೆ: ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

ದಾವಣಗೆರೆ: 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಸಲು ಅಕ್ಟೋಬರ್.31 ಕೊನೆಯ ದಿನಾಂಕವಾಗಿರುತ್ತದೆ.

ದ್ವಿತೀಯ ಪಿ.ಯು.ಸಿ, ಡಿಪ್ಲೊಮಾ, ಪಾಲಿಟೆಕ್ನಿಕ್/ಪದವಿ/ಸ್ನಾತಕೋತ್ತರ/ಬಿ.ಇ ಮೆಡಿಕಲ್ ಕೋರ್ಸುಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್‍ಗಳ ದೃಢೀಕೃತ ಪ್ರತಿ ಹಾಗೂ ಆನ್‍ಲೈನ್ ಅರ್ಜಿ ಹಾಕಿದ ಪ್ರತಿಯನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ: 37, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ದಾವಣಗೆರೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top