Connect with us

Dvgsuddi Kannada | online news portal | Kannada news online

ದಾವಣಗೆರೆ: ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಡಿ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಡಿ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: 2022-23ನೇ ಸಾಲಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಡಿ ಬರುವ ಹಿಂದುಳಿದ ವರ್ಗಗಳಾದ ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಅಲೆಮಾರಿ/ಅರೆ ಅಲೆಮಾರಿ, ವೀರಶೈವ ಲಿಂಗಾಯುತ, ಒಕ್ಕಲಿಗ ಹಾಗೂ ಮರಾಠ ಸಮುದಾಯಗಳ ವ್ಯಾಪ್ತಿಗೆ ಒಳಪಡುವ (ಕಾಡುಗೊಲ್ಲ ಮತ್ತು ಹಟ್ಟಿಗೊಲ್ಲ ನಿಗಮಗಳಡಿಯಲ್ಲಿ ಬರುವ ಸಮುದಾಯಗಳನ್ನು ಹೊರತುಪಡಿಸಿ) ಹಿಂದುಳಿದ ವರ್ಗಗಳ ಯುವ ಜನರಿಗೆ ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗಮುಖಿಯನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ITIs, GTTC, KGTTI ರಲ್ಲಿ ಅಲ್ಪಾವಧಿ ಕೋರ್ಸ್‍ಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಅಮೃತ ಮುನ್ನಡೆ ಎಂಬ ಹೊಸ ಯೋಜನೆಯನ್ನು ಘೋಷಿಸಿದೆ.

ಆಸಕ್ತ ಯುವ ಜನರು ಕೌಶಲ್ಯ ಕರ್ನಾಟಕ ತಂತ್ರಾಂಶದ/ (https://www.kaushalkar.com) ಜಾಲತಾಣದ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಸಾಮಾನ್ಯ ಅರ್ಹತೆಗಳು ಮತ್ತು ನಿಬಂಧನೆಗಳು 10ನೇ ತರಗತಿ/ದ್ವಿತೀಯ ಪಿ.ಯು.ಸಿ/ಡಿಪ್ಲೋಮ ಪದವಿ/ಇಂಜಿನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ಮೇಲ್ಕಂಡ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು.

ವಯೋಮಿತಿ 18 ವರ್ಷಗಳಿಂದ 25 ವರ್ಷಗಳ ಒಳಗಿರಬೇಕು (ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕುಟುಂಬದ ವಾರ್ಷಿಕ ವರಮಾನ/ಆದಾಯ ಮಿತಿ ಇರುವುದಿಲ್ಲ. ಪ್ರವರ್ಗ-2ಎ, 3ಎ ಮತ್ತು 3ಬಿಗೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ/ಆದಾಯ ರೂ. 8.00 ಲಕ್ಷಗಳಿಗಿಂತ ಕಡಿಮೆ ಇರಬೇಕು.
ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು ಹಾಗೂ ಅರ್ಜಿದಾರರ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ ಹಾಗೂ ಕೇಂದ್ರ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ. ಅರ್ಜಿದಾರರ ಹೆಸರು ಆಧಾರ್ ಕಾರ್ಡ್, ಜಾತಿ/ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆ ಆಗಿರಬೇಕು.

ಅರ್ಜಿ ಸಲ್ಲಿಸುವ 48 ಗಂಟೆಗಳ ಮುನ್ನ ಆIಉI ಐಔಅಏಇಖ ನಲ್ಲಿ ತಮ್ಮ ದಾಖಲಾತಿಗಳನ್ನು ಅಪ್ಲೋಡ್ ಮಾಡತಕ್ಕದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29.08.2022. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ನಿಗಮಗಳ ವೆಬ್‍ಸೈಟ್‍ಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08192-230934 ಅನ್ನು ಸಂಪರ್ಕಿಸಬಹುದಾಗಿರುತ್ತದೆ.
https://www.dbcdc.karnataka.gov.in, https://kvcdcl.karnataka.govi.in https://ambigaradevelopment.karnataka.gov.in https://kmmd.karnataka.gov.in https://kssd.karnataka.gov.in https://kaad.karnataka.govi.in https://kvcdc.karnataka.gov.in https://kvldcl.karnataka.gov.in https://kmcdc.karnataka.gov.in https://uppardevelopment.karnataka.gov.xn--in-2vha9jyc/ ಸಂಪರ್ಕಿಬಹುದೆಂದು ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top