Connect with us

Dvgsuddi Kannada | online news portal | Kannada news online

ದಾವಣಗೆರೆ: ಮಹಿಳಾ ಉದ್ಯಮಿಗಳಿಗೆ ಉದ್ಯಮಶೀಲತೆ ತರಬೇತಿ

ದಾವಣಗೆರೆ

ದಾವಣಗೆರೆ: ಮಹಿಳಾ ಉದ್ಯಮಿಗಳಿಗೆ ಉದ್ಯಮಶೀಲತೆ ತರಬೇತಿ

ದಾವಣಗೆರೆ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಸಿಡಾಕ್ (ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ದಾವಣಗೆರೆ ಜಿಲ್ಲೆಯ ಆಸಕ್ತ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪ್ರಸಕ್ತ ವರ್ಷದ ಸೆಪ್ಟೆಂಬರ್ ತಿಂಗಳಿನ ಮೊದಲನೇ ವಾರದಲ್ಲಿ ಸಂಘಟಿಸಲು ಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಉದ್ಯಮಶೀಲರ ಗುಣಲಕ್ಷಣಗಳು, ಸಾಮಾನ್ಯ ವ್ಯಕ್ತಿಯಿಂದ ಉದ್ಯಮಶೀಲ ವ್ಯಕ್ತಿಯಾಗಿ ಪರಿವರ್ತನೆಯಾಗಲು ಸಾಧನಾ ಪ್ರೇರಣ ತರಬೇತಿ, ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಮಜಲುಗಳು, ಉದ್ಯಮಾವಕಾಶಗಳ ಮಾಹಿತಿ, ಉದ್ಯಮ ಆಯ್ಕೆಯ ವಿಧಾನ, ಹಣಕಾಸು ನಿರ್ವಹಣೆ, ಮಾರುಕಟ್ಟೆ ನಿರ್ವಹಣೆ, ಲೆಕ್ಕಪತ್ರ ನಿರ್ವಹಣೆ, ಸಣ್ಣ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳನ್ನು ಪರಿಣಿತ ಅತಿಥಿ ಬೋಧಕರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗುವುದು, ಶಿಬಿರಾರ್ಥಿಗಳು ಉದ್ಯಮ ಪ್ರಾರಂಭಿಸಲು ಬೆಂಬಲ ಸೇವೆ ಒದಗಿಸಲಾಗುವುದು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಲು ಆಸಕ್ತ 18 ರಿಂದ 55 ವರ್ಷ ವಯೋಮಿತಿಯ 10ನೇ ತರಗತಿ ಪಾಸಾದ ಅರ್ಜಿ ಸಲ್ಲಿಸಲು ಇಚ್ಛಿಸುವ ಮಹಿಳಾ ಉದ್ಯಮಾಕಾಂಕ್ಷಿಗಳು 2 ಪಾಸ್‍ಪೆÇೀರ್ಟ್ ಅಳತೆಯ ಫೆÇೀಟೋ ಹಾಗೂ ಆಧಾರ್ ಕಾರ್ಡ್‍ನ ಪ್ರತಿಯೊಂದಿಗೆ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಪ್ಲಾಟ್ ನಂ 76ಎ-(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ. ರಸ್ತೆ, ದಾವಣಗೆರೆ 577006 ಅಥವಾ ದೂರವಾಣಿ ಸಂಖ್ಯೆ ತರಬೇತಿದಾರರಾದ ಬಸವರಾಜ -9164742033 ಹಾಗೂ ವಿನಯ.ಜಿ.ಕೆ-9886115200 ಸಿಡಾಕ್ ದಾವಣಗೆರೆ ವಿಭಾಗ ಇವರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
ಕಾರ್ಯಕ್ರಮವು ಉಚಿತವಾಗಿದ್ದು ತರಬೇತಿ ವೇಳೆಯಲ್ಲಿ ಊಟೋಪಚಾರ ಒದಗಿಸಲಾಗುವುದು. ಆಯ್ಕೆಯಾದ ಶಿಬಿರಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಪ್ರಯಾಣ ಮಾಡಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top