ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಭೈರನಹಳ್ಳಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮದ ಹೊರ ವಲಯದಲ್ಲಿ ಸೆರೆ ಹಿಡಿದಿದ್ದಾರೆ.
ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ಭೈರನಹಳ್ಳಿಯಲ್ಲಿ ಬೋನ್ ಇರಿಸಿದ್ದು, ಆಹಾರ ಹುಡುಕಿಕೊಂಡು ಬಂದ ಚಿರತೆ ಬೋನ್ಗೆ ಬಿದ್ದಿದೆ. ಇದರಿಂದ ಭಯದಲ್ಲಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಈ ಕಾರ್ಯಾಚರಣೆಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.



