Connect with us

Dvgsuddi Kannada | online news portal | Kannada news online

ದಾವಣಗೆರೆ: ಉದ್ಯೋಗಸ್ಥ ಮಹಿಳಾ ವಸತಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಉದ್ಯೋಗಸ್ಥ ಮಹಿಳಾ ವಸತಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: 2022-23ನೇ ಸಾಲಿನಲ್ಲಿ ಜಿಲ್ಲೆಯ ಅರ್ಹ ಅಲ್ಪಸಂಖ್ಯಾತರ ಉದ್ಯೋಗಸ್ಥ ಮಹಿಳೆಯರಿಂದ ವಸತಿನಿಲಯ ಪ್ರವೇಶಾಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ ದುಡಿಯುವ ಮಹಿಳೆಯರ ಸುರಕ್ಷತೆಯ ಹಿತದೃಷ್ಠಿಯಿಂದ ಉದ್ಯೋಗಸ್ಥ ಮಹಿಳಾ ವಸತಿ ನಿಲಯವನ್ನು ದಾವಣಗೆರೆ ನಗರದ ಕುಂದುವಾಡ ರಸ್ತೆಯ ಮಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡದಲ್ಲಿ ಪ್ರಾರಂಭಿಸಲಾಗಿದೆ.

ವಸತಿ ನಿಲಯದಲ್ಲಿ ಉಚಿತವಾಗಿ ಮೂಲಭೂತ ಸೌಕರ್ಯ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಆಸಕ್ತಿಯುಳ್ಳ ಅಲ್ಪಸಂಖ್ಯಾತ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಪಾರ್ಸಿ ಜನಾಂಗದ ಅರ್ಹ ಅಲ್ಪಸಂಖ್ಯಾತ ಉದ್ಯೋಗಸ್ಥ ಮಹಿಳೆಯರು ಆಗಷ್ಟ್ 31 ರೊಳಗಾಗಿ ಕುಂದುವಾಡ ರಸ್ತೆಯ ಮಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ 08192 250022 ಅಥವಾ 9148938450 ಗೆ ಸಂಪರ್ಕಿಸಬಹುದಾಗದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top