Connect with us

Dvgsuddi Kannada | online news portal | Kannada news online

 ದಾವಣಗೆರೆಗೆ: ಆ.14 ರಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಆಗಮನ

ದಾವಣಗೆರೆ

 ದಾವಣಗೆರೆಗೆ: ಆ.14 ರಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಆಗಮನ

ದಾವಣಗೆರೆ: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ  ಅವರು  ಆ.14 ರಂದು ಬೆಂಗಳೂರಿನಿಂದ ಹೊರಟು ಸಂಜೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಆ.15 ರಂದು ಬೆಳಿಗ್ಗೆ 08.30 ಕ್ಕೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. ನಂತರ ಬೆ.09 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗುವ 75 ನೇ ಸ್ವಾತಂತ್ರ್ಯೋತ್ಸವದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ದಾವಣಗೆರೆಯಿಂದ ರಸ್ತೆಯ ಮೂಲಕ ಹಾವೇರಿಗೆ ತೆರಳುವರೆಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top