Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಕಲಚೇತನರಿಗೆ ಸುವಿಧಾ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ವಿಕಲಚೇತನರಿಗೆ ಸುವಿಧಾ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ: 2022-23ನೇ ಸಾಲಿನಲ್ಲಿ ಸುವಿಧಾ ಯೋಜನೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಇವರಿಂದ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ.

ಇಲಾಖೆಯ 08 ಫಲಾನುಭವಿ ಆಧಾರಿತ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್‍ಲೈನ್ ವೇದಿಕೆಯಲ್ಲಿ ಅಳವಡಿಸಲಾಗಿರುವ ಯೋಜನೆಗಳ ಪಟ್ಟಿ ಮೆರಿಟ್ ವಿದ್ಯಾರ್ಥಿವೇತನಕ್ಕಾಗಿ ಬಹುಮಾನ ಹಣ. ಶಿಶುಪಾಲನಾ ಭತ್ಯೆ. ನಿರುದ್ಯೋಗ ಭತ್ಯೆ ಆಧಾರ ಯೋಜನೆ. ಮರಣ ಪರಿಹಾರ ನಿಧಿ, ಸಾಧನೆ ಯೋಜನೆ. ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆಗಳನ್ನು ಆನ್‍ಲೈನ್ ವೇದಿಕೆಯಲ್ಲಿ ಅನುಷ್ಠಾನಗೊಳಿಸುವ ಉದ್ದೇಶದಿಂದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ 08 ಫಲಾನುಭವಿ ಆಧಾರಿತ ಯೋಜನೆಗಳಿಗೆ 2022-23ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ(Suvidha website URL:https://suvidha.karnataka.gov.in/)ಫೊರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top