ದಾವಣಗೆರೆ: ಕೊಳಚೆ ನೀರು ನಿಂತಿದ್ದ ದೊಗ್ಗಳ್ಳಿ ಕಾಂಪೌಡ್ ಪ್ರದೇಶಕ್ಕೆ ಭೇಟಿ ನೀಡಿದ ಸಂಸದ ಜಿ.ಎಂ. ಸಿದ್ದೇಶ್ವರ, ಕೂಡಲೇ ಸ್ಥಳ ಸ್ವಚ್ಛಗೊಳಿಸಿ ನೀರು ನಿಲ್ಲದಂತೆ ರಸ್ತೆ ಹಾಗೂ ಯುಜಿಡಿ ಕಾಮಗಾರಿ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.
ಜನರು ಕೊಳಚೆ ಪ್ರದೇಶದಲ್ಲಿ ಓಡಾಡುವುದು ಕಷ್ಟವಾಗಿದ್ದು, ಮಳೆಗಾಲದಲ್ಲಿ ನೀರು ಶೇಖರಣೆಯಾಗಿ ಸುತ್ತ-ಮುತ್ತಲಿನ ಪ್ರದೇಶ ಮಲಿನಗೊಳ್ಳುತ್ತಿದೆ. ನಗರದಲ್ಲಿ ಕೊಳಚೆ ನೀರು ನಿಲ್ಲದಂತೆ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಮಹಾನಗರ ಪಾಲಿಕೆಯ ಮಹಾಪೌರ ಎಸ್.ಟಿ.ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದ್ದಜ್ಜಿ, ಡಿಹೆಚ್‍ಒ ಡಾ.ನಾಗರಾಜ್, ಆರ್‍ಸಿಹೆಚ್ ಅಧಿಕಾರಿ ಡಾ.ಮೀನಾಕ್ಷಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.