Connect with us

Dvgsuddi Kannada | online news portal | Kannada news online

ದಾವಣಗೆರೆ: ದೇವರಾಜ ಅರಸು ಜಯಂತಿಯ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ದಾವಣಗೆರೆ

ದಾವಣಗೆರೆ: ದೇವರಾಜ ಅರಸು ಜಯಂತಿಯ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ದಾವಣಗೆರೆ: ಡಿ.ದೇವರಾಜ ಅರಸುರವರ 107ನೇ ಜನ್ಮದಿನಾಚರಣೆಯ ಅಂಗವಾಗಿ ನಡೆದ ಎರಡನೇ ದಿನದ ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಡಿ. ದೇವರಾಜ ಅರಸುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಂತರ ಮಾತಾನಾಡಿದ ಅವರು ಡಿ.ದೇವರಾಜ ಅರಸುರವರು ಬಡವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿ, ಸಾವಿರಾರು ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಆಶ್ರಯತಾಣ ಮಾಡಿಕೊಟ್ಟರು. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಹೊರಹೊಮ್ಮಿ, ಪಡೆದುಕೊಂಡ ಉಪಯೋಗವನ್ನು ಒಬ್ಬರಿಂದ ಮತ್ತೊಬ್ಬರಿಗೆ ಸಹಾಯಹಸ್ತ ಚಾಚುತ್ತಾ ಭಾರತ ದೇಶವನ್ನು ಪ್ರಪಂಚದ ಬಲಿಷ್ಠ ರಾಷ್ಟ್ರವಾಗಿ ನಿರ್ಮಾಣ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್.ಬಿ.ಮದರಿ ಇವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ನಡೆಸಿದ ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಫರ್ಧೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ವಿಜೇತರಾದ ನಿಲಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಿದರು.ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿನಿಲಯದ ಬಾಲಕಿಯರಿಂದ ನಾಡಗೀತೆಯನ್ನು ಹಾಡಿದರು. ಹರಿಹರದ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ನುಸ್ರತ್ ಪರ್ವೀನ್ ಸ್ವಾಗತಿಸಿದರು.

ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಿದರು.ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ದಾವಣಗೆರೆ ಜಿಲ್ಲೆಯ, 05 ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ವಿಸ್ತರಣಾಧಿಕಾರಿಗಳು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

Dvgsuddi.com is a live Kannada news portal. Kannada news online. political, Informative, Education, job, local (davangere), crime, agriculture, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ಕೃಷಿ, ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top