Connect with us

Dvgsuddi Kannada | online news portal | Kannada news online

ದಾವಣಗೆರೆ: ಸ್ವಾತಂತ್ರ್ಯ ಅಮೃತ ಮಹೋತ್ಸವ; ಪುಸ್ತಕ ಮಾರಾಟ ಅಭಿಯಾನ

ದಾವಣಗೆರೆ

ದಾವಣಗೆರೆ: ಸ್ವಾತಂತ್ರ್ಯ ಅಮೃತ ಮಹೋತ್ಸವ; ಪುಸ್ತಕ ಮಾರಾಟ ಅಭಿಯಾನ

ದಾವಣಗೆರೆ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 02 ರಿಂದ ಆ.29 ರವರಗೆ ನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಅಂಗವಾಗಿ ಅಮೃತ ಪುಸ್ತಕ ಮಾರಾಟ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಈ ಅಭಿಯಾನವನ್ನು ಆ.25 ರಂದು ಬೆಳಗ್ಗೆ 10 ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಹಾಗೂ ಮಧ್ಯಾಹ್ನ 12 ಗಂಟೆಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಎಲ್ಲಾ ಪುಸ್ತಕಗಳನ್ನು ಶೇ.50% ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು ಮತ್ತು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕ (ತ್ಯಾಗ ಬಲಿದಾನಗಳ ಕಥಾನಕ ) ಎಂಬ 28 ನಿಮಿಷಗಳ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ರಿಜಿಸ್ಟ್ರಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top