ದಾವಣಗೆರೆ: 2022-23ನೇ ಸಾಲಿನ ಒಕ್ಕಲಿಗ ಸಮುದಾಯದ ಸರ್ವತೋಮಖ ಅಭಿವೃದ್ದಿ ನಿಗಮದಿಂದ ಒಕ್ಕಲಿಗರ ಸ್ವಯಂ ಉದ್ಯೋಗ ಯೋಜನೆ, ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ / ಸರಕು ಸಾಗಾಣಿಕೆ ವಾಹನ ಕೊಳ್ಳಲು ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ಕೌಶಲ್ಯಾಭಿವೃದ್ದಿ ತರಬೇತಿ ನೀಡಲಾಗುತ್ತದೆ.
ಈ ಯೋಜನೆಯ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಆ.30 ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ https://kvcdc.karnataka.gov.in ನ್ನು ವೀಕ್ಷಿಸಬಹುದು ಎಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



