Connect with us

Dvgsuddi Kannada | online news portal | Kannada news online

ದಾವಣಗೆರೆ 304 ಕ್ವಿಂಟಲ್ ಪಡಿತರ ಅಕ್ಕಿ, ರಾಗಿ ಜಪ್ತಿ ; ಆ.30 ರಂದು ಬಹಿರಂಗ ಹರಾಜು

ಜಗಳೂರು

ದಾವಣಗೆರೆ 304 ಕ್ವಿಂಟಲ್ ಪಡಿತರ ಅಕ್ಕಿ, ರಾಗಿ ಜಪ್ತಿ ; ಆ.30 ರಂದು ಬಹಿರಂಗ ಹರಾಜು

ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನ ಭರಮಸಮುದ್ರ ಗ್ರಾಮದ ಹತ್ತಿರ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಳ್ಳಲಾಗಿದ್ದ ಪಡಿತರ ಅಕ್ಕಿಯನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಪತ್ತೆ ಮಾಡಿ, ಜಪ್ತಿ ಮಾಡಿಕೊಳ್ಳಲಾದ ಧಾನ್ಯವನ್ನು ಆ.30 ರಂದು ಜಗಳೂರು ಎಪಿಎಂಸಿ ಆವರಣದಲ್ಲಿನ ಕೆಎಸ್‍ಸಿಎಫ್‍ಸಿ ಸಗಟು ಮಳಿಗೆ 1 ರಲ್ಲಿ ಬಹಿರಂಗ ಹರಾಜು ಮಾಡಲಾಗುವುದು, ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.

ಜಗಳೂರು ಭರಮಸಮುದ್ರ ಗ್ರಾಮದ ವಾಸದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ 304.30 ಕ್ವಿಂ. ಅಕ್ಕಿಯನ್ನು ಆಹಾರ ನಿರೀಕ್ಷಕರು ಭಾಗ-1 ಮತ್ತು ಪೊಲೀಸ್ ಉಪನಿರೀಕ್ಷಕರು ಪತ್ತೆ ಮಾಡಿ, ಜಪ್ತಿ ಮಾಡಿಕೊಂಡಿದ್ದರು.ಜಪ್ತಿ ಮಾಡಿಕೊಳ್ಳಲಾಗಿರುವ ಅಕ್ಕಿ ಮತ್ತು ರಾಗಿಯನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ, ಆ.30 ರಂದು ಬೆಳಿಗ್ಗೆ 11 ಗಂಟೆಗೆ ಆಯಾ ಪ್ರಮಾಣಕ್ಕೆ ಅನುಗುಣವಾಗಿ ವಿವಿಧ ಸಮಯದಲ್ಲಿ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ 1, ಎ.ಪಿ.ಎಂ.ಸಿ ಆವರಣ, ಜಗಳೂರು ಇಲ್ಲಿ ಸಹಾಯಕ ನಿರ್ದೇಶಕರ ಸಮಕ್ಷಮದಲ್ಲಿ ಬಹಿರಂಗ ಹರಾಜು ಮಾಡಲಾಗುವುದು.

ಹರಾಜಿನಲ್ಲಿ ಭಾಗವಹಿಸುವ ಬಿಡ್ಡುದಾರರು ಎಪಿಎಂಸಿ ಟ್ರೇಡ್ ಲೈಸೆನ್ಸ್‍ನೊಂದಿಗೆ ಹಾಜರಾಗಬೇಕು. ಬಿಡ್ಡುದಾರರು ಹರಾಜು ದಿನ ಒಂದು ಗಂಟೆ ಮುಂಚೆ ಬಂದು ಶೇ. 10 ರಷ್ಟು ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು. ತಪ್ಪಿದಲ್ಲಿ ಅಂತಹವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಹೆಚ್ಚಿನ ಮಾಹಿತಿಯನ್ನು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜಗಳೂರು

To Top