ದಾವಣಗೆರೆ: ಜಿಲ್ಲಾ ಕೈಗಾರಿಕಾ ಉತ್ತೇಜನ ದಾವಣಗೆರೆ ಹಾಗೂ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ವಾಣಿಜ್ಯ ಸಪ್ತಾಹದಲ್ಲಿ ರಫ್ತುದಾರರ ಸಮಾವೇಶವನ್ನು ಸೆ.25 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಹೋಟೆಲ್ ಓಶನ್ ಪಾರ್ಕ್ ಜಿ.ಎಂ.ಐ.ಟಿ ಎದುರು ಇಲ್ಲಿ ಆಯೋಜಿಸಲಾಗಿದೆ.
ಉದ್ಘಾಟನೆಯನ್ನು ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಭೈರತಿ ನೆವೇರಿಸುವರು. ಅಧ್ಯಕ್ಷತೆಯನ್ನು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ವಹಿಸುವರು. ಲೋಕಸಭಾ ಕ್ಷೇತ್ರದ ಸಂಸದ ಜಿ.ಎಂ.ಸಿದ್ದೇಶ್ವರ ಜಿಲ್ಲಾ ರಫ್ತು ಕೈಪಿಡಿ ಬಿಡುಗಡೆ ಮಾಡುವರು.
ಗೌರವಾನ್ವಿತ ಉಪಸ್ಥಿತರಾಗಿ ಚನ್ನಗಿರಿ ಶಾಸಕರು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರು ಮತ್ತು ನಿರ್ದೇಶಕರಾದ ಮಾಡಾಳ್ ವಿರೂಪಾಕ್ಷಪ್ಪ, ಜಗಳೂರು ಶಾಸಕರು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಎಸ್.ವಿ.ರಾಮಚಂದ್ರಪ್ಪ, ಮಾಯಕೊಂಡ ಶಾಸಕರು ಹಾಗೂ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಪ್ರೊ.ಎಂ.ಲಿಂಗಣ್ಣ ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ, ಹೊನ್ನಾಳ್ಳಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಹರಿಹರ ಶಾಸಕ ಎಸ್.ರಾಮಪ್ಪ, ಜಿ.ರಘು ಆಚಾರ್, ಆರ್.ಪ್ರಸನ್ನ ಕುಮಾರ್, ಲಹರ್ ಸಿಂಗ್ ಸಿರೋಯಾ, ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ.ತೇಜಸ್ವಿನಿಗೌಡ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೆಗೌಡ, ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಆರ್.ಶಂಕರ್, ಮಹಾನಗರ ಪಾಲಿಕೆಯ ಮಹಾಪೌರ ಎಸ್.ಟಿ.ವೀರೇಶ್, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನೆ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿಜಯಮಹಾಂತೇಶ ಬಿ.ದಾನಮ್ಮನವರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



