Connect with us

Dvgsuddi Kannada | online news portal | Kannada news online

ದಾವಣಗೆರೆ: ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ದಾವಣಗೆರೆ

ದಾವಣಗೆರೆ: ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2022-23 ನೇ ಸಾಲಿನ ಜಿಲ್ಲೆಯ 6 ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಏರ್ಪಡಿಸಲಾಗಿದೆ.

ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕುಗಳ ಕ್ರೀಡಾಕೂಟವು ಆ.23 ಮತ್ತು 24 ರಂದು ತಾಲ್ಲೂಕು ಕ್ರೀಡಾಂಗಣ ಹೊನ್ನಾಳಿ, ಚನ್ನಗಿರಿ ತಾಲ್ಲೂಕು ಕ್ರೀಡಾಕೂಟವು ಆ.27 ರಂದು ತಾಲ್ಲೂಕು ಕ್ರೀಡಾಂಗಣ ಚನ್ನಗಿರಿ, ದಾವಣಗೆರೆ ತಾಲ್ಲೂಕು ಕ್ರೀಡಾಕೂಟವು ಆ.26 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ, ಜಗಳೂರು ತಾಲ್ಲೂಕು ಕ್ರೀಡಾಕೂಟವು ಆ.27 ರಂದು ತಾಲ್ಲೂಕು ಕ್ರೀಡಾಂಗಣ ಜಗಳೂರು, ಹರಿಹರ ತಾಲ್ಲೂಕು ಕ್ರೀಡಾಕೂಟವು ಆ.29 ರಂದು ನಂದಿಗುಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಲಾಗಿದೆ.

ತಾಲ್ಲೂಕು ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ತಂಡವನ್ನು ಮಾತ್ರ ಜಿಲ್ಲಾ ಮಟ್ಟದ ಸ್ಪರ್ಧೆಗೆ ಕಳುಹಿಸಿಕೊಡಲಾಗುವುದು. ಭಾಗವಿಸುವ ಸ್ಪರ್ಧಾಳುಗಳಿಗೆ ಯಾವುದೇ ವಯಸ್ಸಿನ ನಿರ್ಭಂದ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top