ದಾವಣಗೆರೆ: ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಮಕ್ಕಳ ಭಿಕ್ಷಾಟಣೆ ತಡೆ ಉಸ್ತುವಾರಿ ತಂಡದ ಸದಸ್ಯರಿಗೆ ಹಾಗೂ ಸ್ಥಳೀಯ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಆರ್.ಬಿ ಬಸರಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪೂರ್ಣಿಮ.ಎಂ. ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಎನ್.ಎಂ.ಆಂಜನೇಯ ಗುರೂಜಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರದ ರಾಮನಾಯ್ಕ ವೈ, ಮಕ್ಕಳ ಸಹಾಯವಾಣಿ ಸಂಯೋಜಕರಾದ ಟಿ.ಎಂ.ಕೊಟ್ರೇಶ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಆಮೀರಬಾನು, ಮಕ್ಕಳ ಪಾಲನಾಸಂಸ್ಥೆಯ ಸಿಬ್ಬಂದಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ಜಿಲ್ಲೆಯ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.



