ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆಯಲಿರುವ 2022-23 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. 2022 ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಈ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಅಗಸ್ಟ್ 31 ಕೊನೆಯ ದಿನವಾಗಿದೆ. ದಂಡ ಶುಲ್ಕ ರೂ.50/- ಹೆಚ್ಚುವರಿ ಪಾವತಿಸಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್15 ಕೊನೆಯ ದಿನ ಎಂದು ದಾವಣಗೆರೆ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದ್ದಾರೆ.
ಅರ್ಜಿ ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಪುಸ್ತಕ ಹಾಗೂ ಪರೀಕ್ಷಾ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಪಡೆಯಬಹುದು. ಮನಿ ಆರ್ಡರ್ ಮಾಡಿ ಅಂಚೆ ಮೂಲಕವೂ ತರಿಸಿಕೊಳ್ಳಬಹುದು. ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಶಾಲೆ-ಕಾಲೇಜುಗಳ ಮುಖ್ಯಸ್ಥರು ಈ ಬಗ್ಗೆ ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿಯನ್ನು ನೀಡಿ ಪರೀಕ್ಷೆ ಬರೆಯಲು ಪ್ರೋತ್ಸಾಹ ನೀಡಬೇಕು. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜ ಪೇಟೆ, ಬೆಂಗಳೂರು – 560018, ದೂರವಾಣಿ: 080-26623584, 080-26612991, 080-22423867, 080-26672992, ಮೊ 8660777643 ನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದ್ದಾರೆ.