ದಾವಣಗೆರೆ: 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿರುವ 75 ನ್ಯಾನೊ ಉಪಗ್ರಹಗಳ ಉಡಾವಣೆ ಯೋಜನೆಯಡಿ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಇಸ್ರೋ(ISಖಔ) ಮತ್ತು ಇಂಡಿಯನ್ ಟೆಕ್ನಾಲಜಿ ಕಾಂಗ್ರೇಸ್ ಅಸೋಸಿಯೆಷನ್ (Iಖಿಅಂ) ರವರ ಸಹಯೋಗದೊಂದಿಗೆ ಇಲಾಖೆಯ ಅಂಗ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಸಂಸ್ಥೆಯ ಮುಖಾಂತರ ಪ್ರಾಯೋಗಿಕವಾಗಿ ಒಂದು ನ್ಯಾನೊ ಉಪಗ್ರಹದ ವಿನ್ಯಾಸ ಮತ್ತು ಉಡಾವಣಾ ಯೋಜನೆ (ಪುನೀತ್ ನ್ಯಾನೊ ಉಪಗ್ರಹ ಯೋಜನೆ) ಯನ್ನು ಅನುಷ್ಟಾನಗೊಳಿಸುತ್ತಿದೆ. ಯೋಜನೆಯ ಅನುಷ್ಟಾನದಲ್ಲಿ ವಿಭಾಗದ ಆಯ್ದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ.
ಯೋಜನೆಯ ಅಂಗವಾಗಿ ಬಾಹ್ಯಾಕಾಶ ಪರಿಸರ, ಉಪಗ್ರಹದ ಅನ್ವಯಿಕಗಳು ಮತ್ತು ಇತರೆ ಸಂಬಂಧಿತ ವಿಷಯಗಳ ಬಗ್ಗೆ ರಾಜ್ಯದ ಸರ್ಕಾರಿ ಮತ್ತು ಖಾಸಗಿ ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಅರಿವು ಮತ್ತು ಆಸಕ್ತಿಯನ್ನು ಮೂಡಿಸಲು ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಆಸೋಸಿಯೇಷನ್ ರವರು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಇವರ ಸಹಯೋಗದೊಂದಿಗೆ ವಿವಿಧ ವಿಜ್ಞಾನ ಚಟುವಟಿಕೆ ಸ್ಪರ್ಧೆಗಳನ್ನು ವರ್ಚುಯಲ್‍ನಲ್ಲಿ ಆಯೋಜಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ(ಕಿuiz) ಮತ್ತು ಚಿತ್ರ ಬಿಡುವ ಸ್ಪರ್ಧೆಯನ್ನು (Pಚಿiಟಿಣiಟಿg) ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ (ಇssಚಿಥಿ) ಮತ್ತು ಖಗೋಳಶಾಸ್ತ್ರ ಕುರಿತು ಪೋಸ್ಟರ್ ಪ್ರಸ್ತುತಿ (Posಣeಡಿ) ಸ್ಪರ್ಧೆಗಳನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಆಯೋಜಿಸಲಾಗುತ್ತಿದೆ.
ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ 10 ರೊಳಗಾಗಿ ಆನ್‍ಲೈನ್ ನೋಂದಣಿ ಮಾಡಿಕೊಳ್ಳಲು ಜಿಲ್ಲೆಯ ಎಲ್ಲಾ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.
ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಚಿತ್ರ ಬಿಡಿಸುವ ಸ್ಪರ್ಧೆಯ ಆನ್‍ಲೈನ್ ನೋಂದಣಿ ಲಿಂಕ್-https://forms.gle/GaSmj3ieeggWYRKH6
ಪದವಿಪೂರ್ವ ವಿಭಾಗಜ ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯ ಆನ್‍ಲೈನ್ ನೋಂದಣಿ ಲಿಂಕ್-https://forms.gle/x4zWiqVXofZ9QBD97
ಪ್ರತಿ ಚಟುವಟಿಕೆ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ವಿಜೇತರಾದ ಮೂರು ಸ್ಪರ್ಧಿಗಳು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ವಿಜೇತರಿಗೆ ಡಿಜಿಟಲ್ ಪ್ರಮಾಣ ಪತ್ರಗಳನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಡಾ.ಕೆ.ಗೋಪಾಲಕೃಷ್ಣನ್-9845173730, ಅಂಜನಿ-8722262281, ಪ್ರಿಯಾಂಕ-8105747283, ಆನಂದ ಎ.ಜೆ. ಜಿ.ಪಂ.ದಾವಣಗೆರೆ-9886788622 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.