ದಾವಣಗೆರೆ: ಆ.31 ಸೆ.02 ಹಾಗೂ 04 ಮತ್ತು 08 ರಂದು ದಾವಣಗೆರೆ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬೆ.06 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಗೊಳಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.
ಆ.30 ಮತ್ತು 31 ರಂದು ಗೌರಿ ಗಣೇಶ ಹಬ್ಬವನ್ನು ಜಿಲ್ಲೆಯಾದ್ಯಂತ ಆಚರಿಸುತ್ತಿದ್ದು, ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂಬಂಧ ಗಣೇಶ ಮೂರ್ತಿಗಳನ್ನು ಮೆರವಣೆಗೆ ಮುಖಾಂತರ ವಿಸರ್ಜನಾ ಸ್ಥಳಗಳಿಗೆ ತೆಗೆದುಕೊಂಡು ಹೋಗಲಿದ್ದು, ಈ ಸಂಧರ್ಭದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಅತೀ ಅವಶ್ಯಕವಾಗಿರುತ್ತದೆ ಪ್ರಯುಕ್ತ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಗೊಳಿಸಬೇಕೆಂದು ಪ್ರಕಟಣೆ ತಿಳಿಸಿದೆ.



