Connect with us

Dvgsuddi Kannada | online news portal | Kannada news online

ದಾವಣಗೆರೆ: ಸೆ.12 ರಿಂದ ಉದ್ಯಮಶೀಲತಾಭಿವೃದ್ಧಿ ತರಬೇತಿ ಶಿಬಿರ

ದಾವಣಗೆರೆ

ದಾವಣಗೆರೆ: ಸೆ.12 ರಿಂದ ಉದ್ಯಮಶೀಲತಾಭಿವೃದ್ಧಿ ತರಬೇತಿ ಶಿಬಿರ

ದಾವಣಗೆರೆ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ (ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ದಾವಣಗೆರೆ ಜಿಲ್ಲೆಯ ಆಸಕ್ತ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ ವಸತಿ ರಹಿತ 10 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಬಾಪೂಜಿ ಪಾಲಿಟೆಕ್ನಿಕ್‍ನಲ್ಲಿ ಸೆಪ್ಟೆಂಬರ್ 12 ರಿಂದ 21 ರವರೆಗೆ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಉದ್ಯಮಶೀಲರ ಗುಣಲಕ್ಷಣಗಳು, ಸಾಮಾನ್ಯ ವ್ಯಕ್ತಿಯಿಂದ ಉದ್ಯಮಶೀಲ ವ್ಯಕ್ತಿಯಾಗಿ ಪರಿವರ್ತನೆಯಾಗಲು ಸಾಧನಾ ಪ್ರೇರಣ ತರಬೇತಿ, ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಮಜಲುಗಳು, ಉದ್ಯಮಾವಕಾಶಗಳ ಮಾಹಿತಿ, ಉದ್ಯಮ ಆಯ್ಕೆಯ ವಿಧಾನ, ಹಣಕಾಸು ನಿರ್ವಹಣೆ, ಮಾರುಕಟ್ಟೆ ನಿರ್ವಹಣೆ, ಲೆಕ್ಕಪತ್ರ ನಿರ್ವಹಣೆ, ಸಣ್ಣ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳನ್ನು ಪರಿಣಿತ ಅತಿಥಿ ಬೋಧಕರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗುವುದು. ಶಿಬಿರಾರ್ಥಿಗಳು ಉದ್ಯಮ ಪ್ರಾರಂಭಿಸಲು ಬೆಂಬಲಸೇವೆ ಒದಗಿಸಲಾಗುವುದು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಲು ಆಸಕ್ತ 18 ರಿಂದ 55 ವರ್ಷ ವಯೋಮಿತಿಯ, 10ನೇ ತರಗತಿ ಪಾಸಾದ ಮಹಿಳಾ ಉದ್ಯಮಕಾಂಕ್ಷಿಗಳು 2 ಪಾಸ್‍ಪೋರ್ಟ್ ಅಳತೆಯ ಫೆÇೀಟೋ ಹಾಗೂ ಆಧಾರ್ ಕಾರ್ಡ್‍ನ ಪ್ರತಿಯೊಂದಿಗೆ ಜಂಟಿ ನಿರ್ದೇಶಕರ ಕಛೇರಿ, ಸಿಡಾಕ್, ಪ್ಲಾಟ್ ನಂ: 76ಎ-(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ. ರಸ್ತೆ, ದಾವಣಗೆರೆ 577006 ಅಥವಾ ತರಬೇತುದಾರರ ದೂರವಾಣಿ ಸಂಖ್ಯೆ ಬಸವರಾಜ ಟಿ.ಬಿ 9164742033, ಹಾಗೂ ವಿನಯ ಜಿ.ಕೆ 9886115200 ಸಿಡಾಕ್

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top