Connect with us

Dvgsuddi Kannada | online news portal | Kannada news online

ದಾವಣಗೆರೆ: ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ರೇಷ್ಮೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿರುವ ಜಿಲ್ಲೆಯ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.  ಕನಿಷ್ಟ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳುಸಾಕಾಣಿಕೆ ಮನೆ ಹೊಂದಿರಬೇಕು.

100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ ಹಾಗೂ 1 ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ, ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.

ಈ ಅರ್ಹತೆಗಳನ್ನು ಹೊಂದಿರುವ ರೇಷ್ಮೆ ಬೆಳೆಗಾರರು ಅಗತ್ಯ ದಾಖಲೆಗಳನ್ನು ಒದಗಿಸಿ ಅರ್ಜಿ ಪಡೆಯಬಹುದು. ಹಾಗೂ ಅರ್ಜಿಗಳನ್ನು ಸೆ.30 ರ ಒಳಗೆ ಕಚೇರಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ರೇಷ್ಮೆ ಬೆಳೆಗಾರರು ರೇಷ್ಮೆ ವಿಸ್ತರಣಾಧಿಕಾರಿಗಳು, ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ರೇಷ್ಮೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top