Connect with us

Dvgsuddi Kannada | online news portal | Kannada news online

ದಾವಣಗೆರೆ: ಹಿರಿಯ ನಾಗರಿಕರಿಗೊಂದು ಸುವರ್ಣಾವಕಾಶ; ಸೆ. 26 ರಂದು  ವಿಶೇಷ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ

ದಾವಣಗೆರೆ

ದಾವಣಗೆರೆ: ಹಿರಿಯ ನಾಗರಿಕರಿಗೊಂದು ಸುವರ್ಣಾವಕಾಶ; ಸೆ. 26 ರಂದು  ವಿಶೇಷ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ

ದಾವಣಗೆರೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ಸೆ. 26 ರಂದು ದಾವಣಗೆರೆ ನಗರದ ಎಂ.ಸಿ.ಸಿ. ‘ಬಿ’ ಬ್ಲಾಕ್ ನಲ್ಲಿರುವ ಬಾಪೂಜಿ ಪ್ರೌಢಶಾಲೆ ಆವರಣದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಸ್ಪರ್ಧೆಗಳನ್ನು ಮೂರು ವಯೋಮಾನದ ಗುಂಪುಗಳಲ್ಲಿ ಮಹಿಳೆಯರು ಮತ್ತು ಪುರುಷರಿಗೆ (60 ರಿಂದ 69, 70 ರಿಂದ 79 ಹಾಗೂ 80 ವರ್ಷ ಮೇಲ್ಪಟ್ಟವರು) ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಕ್ರೀಡಾ ಸ್ಪರ್ಧೆಗಳ ವಿಭಾಗದಲ್ಲಿ ನಡಿಗೆ, ರಿಂಗನ್ನು ಬಕೆಟ್‍ನಲ್ಲಿ ಎಸೆಯುವುದು, ಕೇರಂ ಸ್ಪರ್ಧೆ ಇದೆ. ಸಾಂಸ್ಕೃತಿಕ ಸ್ಪರ್ಧೆ ವಿಭಾಗದಲ್ಲಿ ಏಕಪಾತ್ರ ಅಭಿನಯ, ಗಾಯನಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಇವೆ. ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವವರು ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.

ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಛಿಸುವ ಆಸಕ್ತ ಹಿರಿಯ ನಾಗರಿಕರು ಸೆ. 25 ರ ಸಂಜೆ 5.30 ರೊಳಗಾಗಿ ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ನೊಂದಣಿ ಮಾಡಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಕೇಂದ್ರ ದೂರವಾಣಿ: 08192-263939, ಗುರುಮೂರ್ತಿ-9844143827, ಮಾರುತಿ ಬಿ.ಎಸ್-8147838023, ಹಿರಿಯ ನಾಗರಿಕರ ಸಹಾಯವಾಣಿ, ಮೊ:7337635691 (ನವೀನ್) 7483968224 (ಲಕ್ಷ್ಮಿ) ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top